ಕಿಚ್ಚ ಸುದೀಪ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌; ಆಗಸ್ಟ್‌ 19ರಂದು ವಿಕ್ರಾಂತ್‌ ರೋಣ ಸಿನಿಮಾ ಬಿಡುಗಡೆ!

ಸ್ಯಾಂಡಲ್‌ವುಡ್‌ ಸ್ಟಾರ್‌ ನಟ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಸುದೀಪ್‌ ಗುಡ್‌ ನ್ಯೂಸ್‌ ನೀಡಿದ್ದು, ತಮ್ಮ ಅಭಿನಯದ ‘ವಿಕ್ರಾಂತ್ ರೋಣ’ ಸಿನಿಮಾ ಇದೇ ಆಗಸ್ಟ್​ 19 ರಂದು ಭಾರತದಾದ್ಯಂತ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಸುದೀಪ್‌, “ವಿಕ್ರಾಂತ್ ರೋಣ ಸಿನಿಮಾದ ಚಿತ್ರೀಕರಣ ಸಿದ್ದತೆ ಮತ್ತು ಪ್ರಕ್ರಿಯೆಯ ಆನಂದವನ್ನು ಅನುಭವಿಸಿದ ನಂತರ ಈಗ *ರೋಮಾಂಚನಕಾರಿ* ಸುದ್ದಿಯೊಂದನ್ನು ನಿಮ್ಮೊಂದಿಗೆ ಹಂಚಿಕೊಳ್ಳುವ ಸಮಯ! ವಿಕ್ರಾಂತ್ ರೋಣ ಸಿನಿಮಾ ಆಗಸ್ಟ್ 19 ರಂದು ಭಾರತದಾದ್ಯಂತ ಬಿಡುಗಡೆಗೊಳ್ಳುತ್ತಿದೆ ಎಂದು ತಿಳಿಸಲು ನಮ್ಮ ವಿಕ್ರಾಂತ್ ರೋಣ ತಂಡವು ಹರ್ಷಿಸುತ್ತದೆ” ಎಂದು ಹೇಳಿದ್ದಾರೆ.

ಕಳೆದ ಮೂರು ದಿನಗಳ ಹಿಂದೆ ತಮ್ಮ ಅಭಿಮಾನಿಗಳಿಗೆ ಏಪ್ರಿಲ್ 15 ರಂದು ಸರ್ ಪ್ರೈಸ್ ನೀಡುವುದಾಗಿ ಸುದೀಪ್‌ ಟ್ವೀಟ್‌ ಮಾಡಿದ್ದರು. ಅವರ ಟ್ವೀಟ್‌ ಅಭಿಮಾನಿಗಳನ್ನು ಕಾತುರಗೊಳಿಸಿತ್ತು. ಇದೀಗ, ಮತ್ತೊಂದು ಟ್ವೀಟ್‌ ಮಾಡಿರುವ ಸುದೀಪ್‌ ತಮ್ಮ ಸಿನಿಮಾ ವಿಕ್ರಾಂತ ರೋಣ ಬಿಡುಗಡೆಯಾಗುವ ದಿನಾಂಕವನ್ನು ಘೋಷಿಸಿದ್ದಾರೆ.

https://twitter.com/KicchaSudeep/status/1382581879933587456?s=20

‘ವಿಕ್ರಾಂತ್ ರೋಣ’ ಸಿನಿಮಾವನ್ನು ನಿರ್ದೇಶಕ ಅನೂಪ್ ಭಂಡಾರಿ ನಿರ್ದೇಶನ ಮಾಡಿದ್ದಾರೆ. ಜಾಕ್ ಮಂಜು ನಿರ್ಮಾಣ ಮಾಡಿರುವ ಈ ಸಿನಿಮಾದಲ್ಲಿ ಕಿಚ್ಚ ಸುದೀಪ್, ನಿರೂಪ್ ಭಂಡಾರಿ, ನೀತಾ ಅಶೋಕ್, ರವಿಶಂಕರ್ ಗೌಡ ಸೇರಿದಂತೆ ಹಲವು ನಟರು ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.

ಕನ್ನಡ, ತಮಿಳು, ತೆಲಗು ಹಾಗೂ ಹಿಂದಿ ಸೇರಿದಂತೆ ಬಹುಭಾಷೆಯಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದೆ.

ಇದನ್ನೂ ಓದಿ: ‘ಮತ್ತೆ ಲಾಕ್ ಡೌನ್ ಆಗೋದು ಬೇಡ, ಕೊರೊನಾ ನಿಯಮ ಪಾಲಿಸಿ ‘- ನಟ ಶಿವರಾಜಕುಮಾರ್ ಮನವಿ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights