12 ರಾಜ್ಯಗಳ 16 ಕ್ಷೇತ್ರಗಳಿಗೆ ಉಪಚುನಾವಣೆ: ಬಂಗಾಳದಲ್ಲಿ 05ನೇ ಹಂತದ ಮತದಾನ!

ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಪೈಕಿ ನಾಲ್ಕು ರಾಜ್ಯಗಳಲ್ಲಿ ಮತದಾನ ಮುಗಿದಿದೆ. ಬಂಗಾಳದಲ್ಲಿ ಇಂದು ಐದನೇ ಹಂತದ ಮತದಾನ ನಡೆಯುತ್ತಿದೆ. ಇನ್ನೂ ಮೂರು ಹಂತಗಳ ಮತದಾನ ಬಾಕಿ ಇವೆ. ಇಂದು ಬಂಗಾಳದ  45 ವಿಧಾನಸಭಾ ಕ್ಷೇತ್ರಗಳು ಹಾಗೂ 12 ರಾಜ್ಯಗಳ 2 ಲೋಕಸಭಾ ಮತ್ತು 14 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.

ಇಂದು ಬಂಗಾಳದಲ್ಲಿ ನಡೆಯುತ್ತಿರುವ ಮತದಾನವು ಆಡಳಿತಾರೂಢ ಟಿಎಂಸಿ ಪಕ್ಷಕ್ಕೆ ಮಹತ್ವದ್ದಾಗಿದೆ. ಮತದಾನಕ್ಕೆ ಹೋಗಿರುವ 45 ಕ್ಷೇತ್ರಗಳಲ್ಲಿ 32 ಕ್ಷೇತ್ರಗಳನ್ನು ಕಳೆದ 2016ರ ಚುನಾವಣೆಯಲ್ಲಿ ಟಿಎಂಸಿ ಗೆದ್ದಿದ್ದು, ಉಳಿದಂತೆ 10 ಸ್ಥಾನಗಳನ್ನು ಕಾಂಗ್ರೆಸ್‌- ಎಡಪಕ್ಷಗಳ ಮೈತ್ರಿ ಕೂಟವು ಗೆದ್ದುಕೊಂಡಿತ್ತು. ಈ ಬಾರಿ ಬಿಜೆಪಿಯು ಇಲ್ಲಿನ ಕೆಲವು ಕ್ಷೇತ್ರಗಳನ್ನು ಕಸಿದುಕೊಳ್ಳುವ ನಿರೀಕ್ಷೆಯಲ್ಲಿದೆ.

ಇನ್ನು ದೇಶದ 12 ರಾಜ್ಯಗಳಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಆಂಧ್ರಪ್ರದೇಶದ ತಿರುಪತಿ ಹಾಗೂ ಕರ್ನಾಟಕದ ಬೆಳಗಾವಿ ಲೋಕಸಭಾ ಕ್ಷೇತ್ರಗಳು ಮತ್ತು ರಾಜಸ್ಥಾನ (3), ಕರ್ನಾಟಕ (2), ಗುಜರಾತ್‌, ಜಾರ್ಖಂಡ್‌, ಮಧ್ಯಪ್ರದೇಶ, ಮಹಾರಾಷ್ಟ್ರ, ಮಿಜೋರಾಂ, ನಾಗಾಲ್ಯಾಂಡ್‌, ಒಡಿಶಾ, ರಾಜಸ್ಥಾನ, ತೆಲಂಗಾಣ ಹಾಗೂ ಉತ್ತರಾಖಂಡದ (ತಲಾ 1) ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.

ಇದನ್ನೂ ಓದಿ: ರಾಜ್ಯದ 3 ಕ್ಷೇತ್ರಗಳಲ್ಲಿ ಉಪ-ಸಮರ: ಕಾಂಗ್ರೆಸ್‌-BJP ನಡುವೆ ಜಿದ್ದಾಜಿದ್ದಿ; ಲೆಕ್ಕಕ್ಕಿಲ್ಲದ ಜೆಡಿಎಸ್‌!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights