ಜನವರಿ 26ರಂದು ಕೆಂಪು ಕೋಟೆ ಗಲಭೆ ಪ್ರಕರಣ : ದೀಪ್ ಸಿಧುಗೆ ಜಾಮೀನು!

ಜನವರಿ 26 ರಂದು ಕೆಂಪು ಕೋಟೆ ಗಲಭೆ ಪ್ರಕರಣದ ಆರೋಪಿ ದೀಪ್ ಸಿಧುಗೆ ದೆಹಲಿ ನ್ಯಾಯಾಲಯ ಜಾಮೀನು ನೀಡಿದೆ.

ಗಣರಾಜ್ಯೋತ್ಸವದಂದು ರೈತರ ಟ್ರಾಕ್ಟರ್ ರ್ಯಾಲಿಯ ಸಂದರ್ಭದಲ್ಲಿ ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಬಂಧಿಸಿರುವ ನಟ-ಕಾರ್ಯಕರ್ತ ದೀಪ್ ಸಿಧು ಅವರಿಗೆ ದೆಹಲಿ ನ್ಯಾಯಾಲಯ ಜಾಮೀನು ನೀಡಿದೆ. ಡೀಪ್ ಸಿಧು ಅವರನ್ನು ಫೆಬ್ರವರಿಯಲ್ಲಿ ಹರಿಯಾಣದ ಕರ್ನಾಲ್ ನಿಂದ ದೆಹಲಿ ಪೊಲೀಸ್ ಬಂಧಿಸಿದ್ದರು.

ಕಳೆದ ಬಾರಿ ನ್ಯಾಯಾಲಯ ವಿಚಾರಣೆಯ ವೇಳೆ, ಜನವರಿ 26ರಂದು ಕೆಂಪು ಕೋಟೆಗೆ ಹೋಗುವಂತೆ ಪ್ರತಿಭಟನೆ ನಡೆಸುತ್ತಿದ್ದ ರೈತರಿಗೆ ನಾನು ಯಾವುದೇ ಕರೆ ನೀಡಿಲ್ಲ ಎಂದು ದೀಪ್ ಸಿಧು ನ್ಯಾಯಾಲಯಕ್ಕೆ ತಿಳಿಸಿದ್ದರು. ಸಿಧು ಅವರು ಪ್ರತಿಭಟನೆಗಾಗಿ ಕರೆ ನೀಡಿದ್ದಕ್ಕೆ, ಜನಸಮೂಹವನ್ನು ಪ್ರತಿಭಟನೆಯಲ್ಲಿ ತೊಡಗುವಂತೆ ಮಾಡಿದ್ದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಅವರ ವಕೀಲರು ನ್ಯಾಯಾಲಯದಲ್ಲಿ ವಾದಿಸಿದರು. ಅಲ್ಲದೆ ಸಿಧು ಯಾವ ರೈತ ಮುಖಂಡ, ರೈತ ಸಂಘದ ಸದಸ್ಯರಲ್ಲ ಎಂದು ಅವರ ಪರ ವಕೀಲರು ವಾದಿಸಿದ್ದಾರೆ.

ಜೊತೆಗೆ ಸಿಧು ಅವರು ಫೇಸ್‌ಬುಕ್‌ನಲ್ಲಿ ವೀಡಿಯೊ ಪೋಸ್ಟ್ ಮಾಡುವಲ್ಲಿ ತಪ್ಪು ಮಾಡಿದ್ದಾರೆ ಎಂದು ಒಪ್ಪಿಕೊಂಡಿದ್ದಾರೆ ಮತ್ತು ಅದು ಅಪರಾಧವಲ್ಲ ಎಂದು ವಾದಿಸಿದ ವಕೀಲ ಹೇಳಿದ್ದಾರೆ . “ನಾನು ವೀಡಿಯೊವನ್ನು ಪೋಸ್ಟ್ ಮಾಡಿದ್ದೇನೆ, ಅದು ನನ್ನ ತಪ್ಪು. ಪ್ರತಿಯೊಂದು ತಪ್ಪೂ ಅಪರಾಧವಲ್ಲ. ನಾನು ವಿಡಿಯೋ ಪೋಸ್ಟ್ ಮಾಡಿದ ಕಾರಣ ಮಾಧ್ಯಮಗಳು ನನ್ನನ್ನು ಮುಖ್ಯ ಆರೋಪಿ ಎಂದು ಹೆಸರಿಸಿದೆ. ನನ್ನನ್ನು ಮುಖ್ಯ ಸಂಚುಕೋರನಾಗಿ ಮಾಧ್ಯಮಗಳು ಬಿಂಬಿಸಿದ್ದವು. ಅವು ಹಾಗೇಕೆ ಮಾಡಿದವೆಂದು ನನಗೆ ಅರಿವಿಲ್ಲ” ಏಪ್ರಿಲ್ 8 ರಂದು ಜಾಮೀನು ಅರ್ಜಿಯ ಸಂದರ್ಭದಲ್ಲಿ ಸಿಧು ತನ್ನ ವಕೀಲರ ಮೂಲಕ ನ್ಯಾಯಾಲಯಕ್ಕೆ ತಿಳಿಸಿದ್ದರು.

ಸದ್ಯ ದೀಪ್ ಸಿಧುಗೆ ದೆಹಲಿ ನ್ಯಾಯಾಲಯ ಜಾಮೀನು ನೀಡಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights