ಬಂಡಾಯದ ವಿರುದ್ದ BJP ಕ್ರಮ: ಸ್ವತಂತ್ರ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಪಕ್ಷದಿಂದ ಉಚ್ಛಾಟನೆ!

ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯ ಎದ್ದು, ಸ್ವತಂತ್ರವಾಗಿ ಸ್ಪರ್ಧಿಸಿದ್ದ  ಮಲ್ಲಿಕಾರ್ಜುನ ಖೂಬಾ ಅವರನ್ನು ಪಕ್ಷದಿಂದ ಬಿಜೆಪಿ ಉಚ್ಚಾಟನೆ ಮಾಡಿದೆ.

ಜೆಡಿಎಸ್‌ ತೊರೆದು ಬಿಜೆಪಿ ಸೇರಿದ್ದ ಖೂಬಾ ಅವರು 2018ರ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು. ಇದೀಗ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್‌ ಆಕಾಂಕ್ಷಿಯಾಗಿದ್ದ ಅವರಿಗೆ ಬಿಜೆಪಿ ಟಿಕೆಟ್‌ ನಿರಾಕರಿಸಿತ್ತು. ಆದರೆ, ಬಿಜೆಪಿ ತಮಗೆ ಟಿಕೆಟ್‌ ನೀಡದ ಹಿನ್ನಲೆಯಲ್ಲಿ ಪಕ್ಷದ ವಿರುದ್ಧ ಬಂಡಾಯ ಎದ್ದಿದ್ದ ಖೂಬಾ ಸ್ವತಂತ್ರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

ಪಕ್ಷದ ವಿರುದ್ಧವೇ ಬಂಡಾಯ ಎದ್ದು, ಬಿಜೆಪಿ ವಿರುದ್ಧ ಸ್ಪರ್ಧಿಸಿದ್ದ ಖೂಬಾ ಅವರು ಪಕ್ಷದ ಶಿಸ್ತು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಖೂಬಾ ಅವರನ್ನು 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಛಾಟಿಸಿ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: ರಾಜ್ಯದ 3 ಕ್ಷೇತ್ರಗಳಲ್ಲಿ ಉಪ-ಸಮರ: ಕಾಂಗ್ರೆಸ್‌-BJP ನಡುವೆ ಜಿದ್ದಾಜಿದ್ದಿ; ಲೆಕ್ಕಕ್ಕಿಲ್ಲದ ಜೆಡಿಎಸ್‌!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights