ರಾಜ್ಯದ 3 ಕ್ಷೇತ್ರಗಳಲ್ಲಿ ಉಪ-ಸಮರ: ಕಾಂಗ್ರೆಸ್‌-BJP ನಡುವೆ ಜಿದ್ದಾಜಿದ್ದಿ; ಲೆಕ್ಕಕ್ಕಿಲ್ಲದ ಜೆಡಿಎಸ್‌!

ರಾಜ್ಯದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರ ಹಾಗೂ ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ. ಇಂದು ಮತದಾನ ನಡೆಯುತ್ತಿದೆ. ಮೂರು ಕ್ಷೇತ್ರಗಳಲ್ಲಿಯೂ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಭಾರೀ ಪೈಪೋಟಿ ಎದುರಾಗಿದ್ದು, ಒಂದು ಕ್ಷೇತ್ರದಲ್ಲಿ ಮಾತ್ರ ಜೆಡಿಎಸ್‌ ಕಣಕ್ಕಿಳಿದಿದೆ. ಆದರೆ, ಚುನಾವಣೆಯಲ್ಲಿ ಗೆಲ್ಲಲೇಬೇಕು ಎಂಬ ಇರಾದೆಯೂ ಜೆಡಿಎಸ್‌ ನಾಯಕರಿಗೆ ಇದ್ದಂತೆ ಕಾಣುತ್ತಿಲ್ಲ ಎಂದು ರಾಜಕೀಯ ವಲಯದಲ್ಲಿ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಇಂದು ಬೆಳಗಿನಿಂದಲೇ ಮತದಾನ ಆರಂಭವಾಗಿದೆ. ಮಂದಗತಿಯಲ್ಲಿ ಮತದಾನ ಸಾಗುತ್ತಿದೆ ಎಂದು ತಿಳಿದು ಬಂದಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ 2,566 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ. ಕ್ಷೇತ್ರದಲ್ಲಿ 18,07,250 ಮತದಾರರಿದ್ದಾರೆ. ಅವರಲ್ಲಿ 9,08,103 ಪುರುಷರು ಮತ್ತು 8,99,091 ಮಹಿಳಾ ಮತದಾರರಾಗಿದ್ದಾರೆ.

ಈ ಪೈಕಿ 80 ವರ್ಷ ಮೇಲ್ಪಟ್ಟ 41,535 ಮತದಾರರಿದ್ದು, 12,290 ವಿಶೇಷಚೇತನರಿಗೆ ಅಂಚೆ ಮತದಾನಕ್ಕೆ ಅವಕಾಶ ನೀಡಲಾಗಿದೆ. 7,925 ಸೇವಾ ಮತದಾರರಿಗೆ ಅಂಚೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ: ಮಸ್ಕಿ: ಕಾಂಗ್ರೆಸ್‌-BJP ಅದಲಿ-ಬದಲಿ ಅಭ್ಯರ್ಥಿಗಳ ಹಣಾಹಣಿ; ಮತ್ತೆ ಗೆಲ್ತಾರಾ ಹ್ಯಾಟ್ರಿಕ್‌ ಬಾರಿಸಿದ್ದ ಪ್ರತಾಪಗೌಡ?

ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಹೆಚ್ಚುವರಿ 62 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು 326 ಮತಗಟ್ಟೆಗಳ ಪೈಕಿ 95 ಸೂಕ್ಷ್ಮ ಮತ್ತು 23 ಸಾಮಾನ್ಯ ಮತಗಟ್ಟೆಗಳಾಗಿವೆ. ಬಸವಕಲ್ಯಾಣ ಕ್ಷೇತ್ರದಲ್ಲಿ 1,14,794 ಮಹಿಳಾ ಮತದಾರರು, 1,24,984 ಪುರುಷ ಮತದಾರರಿದ್ದಾರೆ. ಇತರೆ ನಾಲ್ವರು ಮತದಾರರು ಸೇರಿ ಈ ಕ್ಷೇತ್ರದಲ್ಲಿ ಒಟ್ಟು 2,39,782 ಮತದಾರರಿದ್ದಾರೆ.

ರಾಯಚೂರಿನ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಸಹ ಮತದಾನ ಪ್ರಗತಿಯಲ್ಲಿದೆ. ಈ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಜಿದ್ದಾಜಿದ್ದಿ ಏರ್ಪಟ್ಟಿದೆ.

ಇದನ್ನೂ ಓದಿ: ಬಸವ ಕಲ್ಯಾಣದಲ್ಲಿ ಚತುಷ್ಕೋನ ಸ್ಪರ್ಧೆ: 25 ವರ್ಷಗಳ JDS ಭದ್ರಕೋಟೆಯಲ್ಲಿ ಯಾರಿಗೆ ಜಯ?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights