ಕೊರೊನಾ ನಿಯಂತ್ರಣಕ್ಕೆ ಲಾಕ್‌ಡೌನ್‌ ಒಂದೇ ಮಾರ್ಗವಲ್ಲ; ಬೆಂಗಳೂರು ಲಾಕ್‌ಡೌನ್‌ ಮಾಡುವುದಿಲ್ಲ: ಸಚಿವ ಆರ್‌ ಅಶೋಕ್‌

ರಾಜ್ಯ ರಾಜಧಾನಿಯಲ್ಲಿ ಕೊರೊನಾ 2ನೇ ಅಲೆ ಆಕ್ರಮಣಕಾರಿಯಾಗಿದೆ. ದಿನನಿತ್ಯ ಕೊರೊನಾ ಹೊಸ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಲಾಕ್‌ಡೌನ್‌ ಹೇರಲಾಗುತ್ತದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಚಿವ ಆರ್‌.ಅಶೋಕ್‌, ಬೆಂಗಳೂರಿನಲ್ಲಿ ಯಾವುದೇ ಕಾರಣಕ್ಕೂ ಲಾಕ್‌ಡೌನ್‌ ಜಾರಿ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಕೊರೋನಾ ಸೋಂಕಿನ ನಿಯಂತ್ರಣ ಸಂಬಂಧಿಸಿದಂತೆ ಸಿಎಂ ಬಿಎಸ್‌ವೈ ಅನುಪಸ್ಥಿತಿಯಲ್ಲಿ ಕಂದಾಯ ಸಚಿವ ಆರ್ ಅಶೋಕ್ ಅವರ ಅಧ್ಯಕ್ಷತೆಯಲ್ಲಿ ಸಚಿವರು, ಅಧಿಕಾರಿಗಳನ್ನು ಒಳಗೊಂಡು ಸಭೆ ಭಾನುವಾರ ನಡೆದಿದೆ.

ಸಭೆಯ ಬಳಿಕ ಮಾತನಾಡಿದ ಅಶೋಕ್‌, ಬೆಂಗಳೂರಿನಲ್ಲಿ ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಒಂದೇ ಮಾರ್ಗವಲ್ಲ. ಇದರ ಬದಲಾಗಿ ಪರ್ಯಾಯ ಮಾರ್ಗದ ಮೂಲಕ ಕೊರೋನಾ ನಿಯಂತ್ರಕ್ಕೂ ಕ್ರಮ ಕೈಗೊಳ್ಳುವಂತ ನಿರ್ಣಯಕ್ಕೆ ಬರಲಾಗಿದೆ ಎಂದು ತಿಳಿಸಿದ್ದಾರೆ.

ಕೊರೋನಾ ನಿಯಂತ್ರಣಕ್ಕಾಗಿ ಮತ್ತೆ ಬೆಂಗಳೂರಿನಲ್ಲಿ ಲಾಕ್ ಡೌನ್ ಮಾಡೋ ಪ್ರಶ್ನೆಯೇ ಇಲ್ಲ. ಇದರ ಬದಲಾಗಿ ಕೊರೋನಾ ನಿಯಂತ್ರಣಗಾಗಿ ಟಫ್ ರೂಲ್ಸ್ ಜಾರಿಗೊಳಿಸಲಾಗುತ್ತಿದೆ. ಕೊರೋನಾ ನಿಯಂತ್ರಣಕ್ಕಾಗಿ ಕಠಿಣ ನಿಯಮವನ್ನು ತರಲಾಗುತ್ತಿದೆ. ಸಿಎಂ ಯಡಿಯೂರಪ್ಪ ಅವರ ಗಮನಕ್ಕೆ ತಂದು, ಸದ್ಯದಲ್ಲೇ ಕಠಿಣ ನಿಯಮವನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಾಸ್ಕ್‌ ಹಾಕಳಿ – ದೂರ ನಿಂತ್ಕಳಿ; ಹೇಳೋದೊಂದು ಮಾಡೋದು ಇನ್ನೊಂದು; BJP ರಾಜ್ಯಾಧ್ಯಕ್ಷ ನಳಿನ್‌ ಫೋಟೋ ಟ್ರೋಲ್‌!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights