ಇಂದು ರಾತ್ರಿಯಿಂದ ಒಂದು ವಾರ ದೆಹಲಿಯಲ್ಲಿ ಕಂಪ್ಲೀಟ್ ಕರ್ಫ್ಯೂ ಜಾರಿ..!

ಯಾವುದೇ ನಿಯಮಗಳಿಗೆ ಬಗ್ಗದ ಕೊರೊನಾ ಎಗ್ಗಿಲ್ಲದೇ ವೇಗವಾಗಿ ಹರಡುತ್ತಿರುವುದರಿಂದ ದೆಹಲಿಯಲ್ಲಿ ಇಂದು ರಾತ್ರಿಯಿಂದ ಒಂದು ವಾರ ಕಂಪ್ಲೀಟ್ ಕರ್ಫ್ಯೂ ಜಾರಿ ಮಾಡಲಾಗಿದೆ.

ಹೌದು… ದೆಹಲಿಯಲ್ಲಿ ಇಂದು ಕೊರೊನಾ ನಿಯಂತ್ರಣದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಅರವಿಂದ್ ಕೇಜ್ರಿವಾಲ್, ” ಇಂದು ರಾತ್ರಿ 10 ಗಂಟೆಯಿಂದ ಮುಂದಿನ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಜಾರಿಯಾಗಲಿದೆ” ಎಂದು ಹೇಳಿದ್ದಾರೆ.

“ಎಷ್ಟೇ ಪ್ರಯತ್ನ ಪಟ್ಟರೂ ಕೊರೊನಾ ನಿಯಂತ್ರಣಕ್ಕೆ ತರಲು ಸಾಧ್ಯವಾಗುತ್ತಿಲ್ಲ. ಪರಿಸ್ಥಿತಿ ಕೈಮೀರಿ ಹೋಗುತ್ತಿದೆ. ಕೊರೊನಾ ಸಂಖ್ಯೆ ಪ್ರತಿನಿತ್ಯ ಹೆಚ್ಚಾಗುತ್ತಿರುವುದರಿಂದ ಬೆಡ್, ಐಸಿಯು, ಆಮ್ಲಜನಕದ ಕೊರತೆ ಹೆಚ್ಚಾಗುತ್ತಿದೆ. ಹೀಗಾಗಿ ದೆಹಲಿಯಲ್ಲಿ ತುರ್ತು ಸೇವೆಗಳು ಹೊರತುಪಡಿಸಿ ಒಂದು ವಾರ ಕಂಪ್ಲೀಟ್ ಲಾಕ್ ಡೌನ್ ಜಾರಿ ಮಾಡುವುದು ಅನಿವಾರ್ಯವಾಗಿದೆ” ಎಂದು ಸಿಎಂ ಹೇಳಿದ್ದಾರೆ.

ಜೊತೆಗೆ “ನನಗೆ ಗೊತ್ತು ಕರ್ಫ್ಯೂ ನಿಂದ ಎಷ್ಟು ನಷ್ಟವಾಗುತ್ತದೆ ಎಂಬುದು ಅರಿವಿದೆ. ನಾನು ಕೈ ಮುಗಿದು ಕೇಳಿಕೊಳ್ಳುತ್ತೇನೆ. ಇದು ಕೇವಲ ಒಂದು ವಾರದ ಕರ್ಫ್ಯೂ ಮಾಡಿದ್ದೇವೆ. ದಯವಿಟ್ಟು ಸಹಕರಿಸಿ” ಎಂದು ಕೇಳುಕೊಂಡಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights