ನಾನೇನಾದ್ರು ಸತ್ತರೆ ನನ್ನ ಸಾವಿಗೆ ಸಿಎಂ ಬಿಎಸ್‌ವೈ, ಸಚಿವ ಸುಧಾಕರ್ ನೇರ ಹೊಣೆ!: ನಿರ್ದೇಶಕ ಗುರುಪ್ರಸಾದ್

ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿನ ಖ್ಯಾತ ನಿರ್ದೇಶಕ ಗುರುಪ್ರಸಾದ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ಸರ್ಕಾರದ ಅವ್ಯವಸ್ಥೆಯ ವಿರುದ್ದ ವಾಗ್ದಾಳಿ ನಡೆಸಿರುವ ಅವರು, ತಾವೇನಾದರೂ ಮೃತಪಟ್ಟರೆ, ಅದಕ್ಕೆ ಸಿಎಂ ಯಡಿಯೂರಪ್ಪ, ಸಚಿವ ಸುಧಾಕರ್ ಅವರೇ ನೇರ ಹೊಣೆ ಎಂದು ಕಿಡಿಕಾರಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಾಮಾಣಿಕತೆ ಇದ್ದಲ್ಲಿ ಆಡಳಿತ ಇರುತ್ತದೆ. ಪ್ರಾಮಾಣಿಕತೆ ಇಲ್ಲದ ಕಡೆ ರಾಜಕೀಯ ಇರುತ್ತದೆ. ರಾಜಕಾರಣಿಗಳು ಯಾರೂ ಕೂಡ ಸಾಚಾ ಅಲ್ಲ. ರಾಜಕೀಯ ಮಾಡುವುದನ್ನು ಬಿಟ್ಟು ಜನರ ಸೇವೆ ಮಾಡಿ ಎಂದು ಹೇಳಿದ್ದಾರೆ.

ಅಕಸ್ಮಾತ್ ಕೊರೊನಾದಿಂದ ನಾನು ಮೃತಪಟ್ಟರೆ ಸರ್ಕಾರವೇ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ…

ಕೊರೋನಾ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದೆ. ಕೊರೋನಾದಿಂದ ಮೃತಪಟ್ಟ ಪ್ರತಿಯೊಬ್ಬರ ಸಾವಿಗೆ ಮುಖ್ಯಮಂತ್ರಿ, ಆರೋಗ್ಯ ಸಚಿವರು ಮತ್ತು ವಿಜಯೇಂದ್ರ ನೇರ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights