ಕೊರೊನಾ: ಬಿಹಾರದ ಜೆಡಿಯು ಶಾಸಕ ಮೇವಾಲಾಲ್‌ ಚೌಧರಿ ಸಾವು!

ಕೊರೊನಾ ಸೋಂಕಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿಹಾರದ ಜೆಡಿಯು ಶಾಸಕ, ಮಾಜಿ ಸಚಿವ ಮೇವಾಲಾಲ್‌ ಚೌಧರಿ ಅವರು ಸೋಮವಾರ ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.

68 ವರ್ಷದ ಮೇವಾಲಾಲ್‌ ಚೌಧರಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ಪಾಟ್ನಾದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ನಿನ್ನೆ ಮೃತಪಟ್ಟಿದ್ದಾರೆ.

ಚೌಧರಿ ಅವರು ಮುಂಗೇರ್ ಜಿಲ್ಲೆಯ ತಾರಾಪುರದ ಶಾಸಕರಾಗಿದ್ದರು. ಅವರನ್ನು ನಿತೀಶ್ ಕುಮಾರ್ ಅವರ ನೂತನ ಸಂಪುಟದಲ್ಲಿ ಕಳೆದ ವರ್ಷ ನವೆಂಬರ್‌ನಲ್ಲಿ ಶಿಕ್ಷಣ ಸಚಿವರನ್ನಾಗಿ ನಿಯೋಜಿಸಲಾಗಿತ್ತು. ಆದರೆ, ಭ್ರಷ್ಟಾಚಾರದ ಆರೋಪ ಹೊತ್ತಿದ್ದ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡಿದ್ದನ್ನು ವಿರೋಧಿಸಿ ವಿಪಕ್ಷಗಳು ತೀವ್ರ ಟೀಕೆ ಮಾಡಿದ್ದವು. ಈ ಹಿನ್ನೆಲೆಯಲ್ಲಿ ಅವರು ಮೂರೇ ದಿನಗಳಲ್ಲಿ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: ಯಾವುದೇ ಚುನಾವಣೆ ಇಲ್ಲ; ಆದರೂ ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚಿಸುತ್ತೆವೆ ಎಂದು ಬಿಜೆಪಿ ಘೋಷಿಸಿದೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights