‘ತಜ್ಞರ ವರದಿಯನ್ನು ಜಾರಿಗೆ ತನ್ನಿ’ – ಕೊರೊನಾ ತಡೆಗೆ ಸಿದ್ದರಾಮಯ್ಯ ಖಡಕ್ ಸೂಚನೆ!

‘ತಜ್ಞರ ವರದಿಯನ್ನು ಜಾರಿಗೆ ತನ್ನಿ’ ಎಂದು  ರಾಜ್ಯ ಸರ್ಕಾರಕ್ಕೆ ಕೊರೊನಾ ತಡೆ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.

ಕರ್ನಾಟಕದಲ್ಲಿ ಕೊರೋನಾ ಪರಿಸ್ಥಿತಿ ನಿರ್ವಹಣೆ ಸಂಬಂಧ ರಾಜ್ಯಪಾಲರಾದ ವಜುಭಾಯಿ ವಾಲಾ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಕರೆದಿದ್ದ ಸರ್ವಪಕ್ಷಗಳ ಮುಖಂಡರ ಸಭೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ, ಸಿಎಂ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಕೆಲ ಸಚಿವರು ಭಾಗಿಯಾಗಿದ್ದಾರೆ.

ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ‘ಪ್ರತಿಪಕ್ಷಗಳನ್ನು ರಾಜ್ಯ ಸರ್ಕಾರ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಸರ್ಕಾರ ತನ್ನ ತಪ್ಪುಗಳನ್ನು ಒಪ್ಪಿಕೊಳ್ಳಬೇಕು. ಈಗಾಗಲೇ ಚುನಾವಣೆ ಮುಂದೂಡಬೇಕಿತ್ತು ಅದನ್ನ ಸರ್ಕಾರ ಮಾಡಿಲ್ಲ. ಜಾತ್ರೆ, ಧಾರ್ಮಿಕ ಸಮಾರಂಭಗಳನ್ನು ಬಂದ್ ಮಾಡಬೇಕಿತ್ತು. ಇದ್ಯಾವುದನ್ನೂ ಸರ್ಕಾರ ಮಾಡಿಲ್ಲ.ಆದರೆ ಈಗ ಸರ್ಕಾರ ತಪ್ಪು ಮುಚ್ಚಿಕೊಳ್ಳಲು ಸಭೆ ಕರೆದಿದ್ದಾರೆ. ನಾನು ವೈಯಕ್ತಿಕವಾಗಿ ಲಾಕ್ ಡೌನ್ ಮಾಡಿ ಎಂದು ಹೇಳಲ್ಲ. ತಜ್ಞರ ವರದಿಯಂತೆ ಸರ್ಕಾರ ನಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದ್ದಾರೆ.

ಮೊದಲೇ ಸರ್ಕಾರ ಎಚ್ಚೆತ್ತುಕೊಂಡು ಕಠಿಣ ಕ್ರಮ ಜಾರಿಗೆ ಮಾಡಿದ್ದರೆ ಇಷ್ಟು ಜನ ರಾಜ್ಯ ಸಾಯುತ್ತಿರಲಿಲ್ಲ. ಆದರೆ ನೀವು ಮಾಡಿಲ್ಲ, ಮೋದಿನೂ ಮಾಡಿಲ್ಲ. ಚುನಾವಣಾ ಆಯೋಗವೂ ಇದನ್ನ ಮಾಡಿಲ್ಲ ಎಂದು ಟೀಕೆ ಮಾಡಿದ್ದಾರೆ.

ಈಗಾಗಲೇ ಕುಮಾರಸ್ವಾಮಿಯವರು ಲಾಕ್ ಡೌನ್ ಗೆ ಸಲಹೆ ನೀಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಬಡವರಿಗೆ ಆರ್ಥಿಕ ನೆರವು ನೀಡಿ ಲಾಕ್ ಡೌನ್ ಮಾಡಿ ಎನ್ನುವ ಮಾತನ್ನು ಸ್ಪಷ್ಟವಾಗಿ ಹೇಳಿದ್ದಾರೆ. ಲಾಕ್ ಡೌನ್ ಮಾಡುವ ಮುನ್ನ ಆರ್ಥಿಕ ವ್ಯವಸ್ಥೆಗೆ ಪರ್ಯಾಯ ಮಾರ್ಗವನ್ನು ಹುಡುಕಿ ನಂತರ ಲಾಕ್ ಡೌನ್ ಮಾಡಿ ಎನ್ನುವ ಸಲಹೆ ನೀಡಿದ್ದಾರೆ.

ಒಟ್ಟಿನಲ್ಲಿ ಲಾಕ್ ಡೌನ್ ಪರ ಮಾಜಿ ಸಿಎಂಗಳು ಬ್ಯಾಂಟಿಂಗ್ ಮಾಡುತ್ತಿದ್ದು, ರಾಜ್ಯ ಸರ್ಕಾರ ಯಾವ ಕ್ರಮ ಕೈಗೊಳ್ಳುತ್ತದೆ ಎಂದು ಕಾದು ನೋಡಬೇಕಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights