ರಾಜ್ಯದ್ಯಂತ ನೈಟ್ ಕರ್ಫ್ಯೂ; ಶನಿವಾರ-ಭಾನುವಾರ ದಿನವಿಡೀ ಕರ್ಫ್ಯೂ ಜಾರಿಗೊಳಿಸಿ ಸರ್ಕಾರ ಆದೇಶ!
ರಾಜ್ಯದಲ್ಲಿ ಕೊರೊನಾ ಅಬ್ಬರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಮತ್ತು ವೀಕೆಂಡ್ (ಶನಿವಾರ ಮತ್ತು ಭಾನುವಾರ) ಕಂಪ್ಲೀಟ್ ಕರ್ಫ್ಯೂ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಇಂದು (ಮಂಗಳವಾರ) ರಾಜ್ಯಪಾಲ ವಜುಭಾಯಿ ವಾಲ ನೇತೃತ್ವದಲ್ಲಿ ನಡೆದ ಸರ್ವಪಕ್ಷಗಳ ಸಭೆಯ ಬಳಿಕ ರಾಜ್ಯದ್ಯಂತ ಏಪ್ರಿಲ್ 21 ರಿಂದ ಮೇ 4 ರವರೆಗೆ ರಾತ್ರಿ ಕರ್ಫ್ಯೂ ಮತ್ತು ವೀಕ್ ಎಂಡ್ ಕರ್ಪ್ಯೂ (ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆವರೆಗೆ) ಜಾರಿಗೊಳಿಸಿ ಪ್ರಕಟಣೆ ಹೊರಡಿಸಲಾಗಿದೆ.
ರಾಜ್ಯದ ಜನತೆ ಕೊರೊನಾ ಕರ್ಪ್ಯೂ ವನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು, ಕೊರೊನಾ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು ಎಂದು ಮನವಿ ಮಾಡಲಾಗಿದೆ.
ಈಗಾಗಲೇ, ಬೆಂಗಳೂರು, ಮೈಸೂರು, ಮಂಗಳೂರು, ಕಲಬುರಗಿ, ಬೀದರ್, ತುಮಕುರು, ಉಡುಪಿ ಮತ್ತು ಮಣಿಪಾಲ್‌ನಲ್ಲಿ ನೈಟ್ ಕರ್ಫ್ಯೂ ಜಾರಿ ಯಲ್ಲಿದ್ದು, ಈ ನಗರಗಳಲ್ಲಿಯೂ ಕಫ್ಯೂ ಮತ್ತೆ ಮುಂದುವರೆಯಲಿದೆ.
ಸಭೆಯಲ್ಲಿ ಹಲವಾರು ರಾಜಕೀಯ ನಾಯಕರು ಲಾಕ್‌ಡೌನ್ ಮಾಡಬೇಕು ಎಂಬ ಸಲಹೆಯನ್ನು ನೀಡಿದ್ದರು. ಆದರೆ, ಲಾಕ್‌ಡೌನ್ ಒಂದೇ ಪರಿಹಾರವಲ್ಲ ಎಂದು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಕರ್ಫ್ಯೂ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ: ನಡುರಸ್ತೆಯಲ್ಲಿ ಬಸ್‌ನಿಂದ ಪ್ರಯಾಣಿಕರನ್ನು ಕೆಳಗಿಳಿಸಿದ ಉಡುಪಿ ಡಿಸಿ; ವಿದ್ಯಾರ್ಥಿನಿ ಆಕ್ರೋಶ!

