300 ಜನರಿದ್ದ ಗ್ರಾಮದಲ್ಲಿ 146 ಮಂದಿಗೆ ಕೊರೊನಾ; ಇಡೀ ಗ್ರಾಮವೇ ಸೀಲ್‌ಡೌನ್‌!

ದೇಶಾದ್ಯಂತ ಕೊರೊನಾ ಎರಡನೇ ಅಲೆ ಮಿತಿಮೀರಿ ಹರಡುತ್ತಿದೆ. ರಾಜ್ಯದಲ್ಲೂ ಇದರ ಬಿಸಿ ತಟ್ಟಿದ್ದು, ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಮತ್ತು ವೀಕೆಂಡ್‌ ಕರ್ಫ್ಯೂಗಳನ್ನು ಜಾರಿ ಮಾಡಲಾಗಿದೆ. ಈ ಮಧ್ಯೆ ಬೆಳಗಾವಿ ಜಿಲ್ಲೆಯ ಸಣ್ಣ ಗ್ರಾಮವೊಂದರಲ್ಲಿ 146 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಇಡೀ ಊರನ್ನೇ ಸೀಲ್‌ಡೌನ್‌ ಮಾಡಲಾಗಿದೆ.

ಬೆಳಗಾವಿ ಜಿಲ್ಲೆಯ ಪುಟ್ಟ ಗ್ರಾಮವಾದ ಅಬನಾಳಿಯಲ್ಲಿ ಸುಮಾರು 300 ಜನರಿದ್ದು, ಈ ಪೈಕಿ 146 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹೀಗಾಗಿ ಅಧಿಕಾರಿಗಳು ಇಡೀ ಗ್ರಾಮವನ್ನೇ ಸೀಲ್‌ಡೌನ್‌ ಮಾಡಿದ್ದಾರೆ. ಒಂದೇ ಗ್ರಾಮದ ಇಷ್ಟು ಜನರಲ್ಲಿ ಸೋಂಕು ಕಾಣಿಸಿಕೊಂಡಿರುವುದು ಜಿಲ್ಲೆಯಲ್ಲಿ ಭಯದ ಭೀತಿಯನ್ನು ಸೃಷ್ಟಿಸಿದೆ ಎನ್ನಲಾಗಿದೆ.

ಇತ್ತೀಚೆಗೆ ಗ್ರಾಮದಲ್ಲಿ ಹೋಳಿ ಹುಣ್ಣಿಮೆ ಸಂದರ್ಭದಲ್ಲಿ ಸಾತೇರಿ ದೇವಿ ಜಾತ್ರೆ ನಡೆದಿತ್ತು. ಜಾತ್ರೆ ಅಂಗವಾಗಿ ನಾಟಕ ಪ್ರದರ್ಶನ ಏರ್ಪಡಿಸಿದ್ದರಿಂದ ಊರಿನ ಜನರೆಲ್ಲರೂ ನಾಟಕ ಪ್ರದರ್ಶನ ವೀಕ್ಷಿಸಿದ್ದರು. ಅಲ್ಲದೇ ವಲಸೆ ಹೋಗಿದ್ದ ಕಾರ್ಮಿಕರು ಜಾತ್ರೆ ಸಂದರ್ಭದಲ್ಲಿ ಗ್ರಾಮಕ್ಕೆ ಆಗಮಿಸಿದ್ದರು. ಇದು ಇಡೀ ಗ್ರಾಮದಲ್ಲಿ ಮಹಾಮಾರಿ ಹರಡಲು ಕಾರಣವಾಗಿದೆ.

ಇದೀಗ ಮುಂಜಾಗೃತಾ ಕ್ರಮವಾಗಿ ಅಧಿಕಾರಿಗಳು ಇಡೀ ಗ್ರಾಮವನ್ನು ಸೀಲ್ ಡೌನ್ ಮಾಡಿದ್ದು, ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಬಂದ್ ಮಾಡಿದ್ದಾರೆ.

ಇದನ್ನೂ ಓದಿ: ರಾಜ್ಯದ್ಯಂತ ನೈಟ್‌ ಕರ್ಫ್ಯೂ; ಶನಿವಾರ-ಭಾನುವಾರ ದಿನವಿಡೀ ಕರ್ಫ್ಯೂ ಜಾರಿಗೊಳಿಸಿ ಸರ್ಕಾರ ಆದೇಶ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights