ಬೆಂಗಳೂರಿನಲ್ಲಿ ಕಿಲ್ಲರ್ ಕೊರೊನಾಗೆ 34 ವರ್ಷದ 4 ತಿಂಗಳ ಗರ್ಭಿಣಿ ಸಾವು..!

ಕಿಲ್ಲರ್ ಕೊರೊನಾಗೆ 34 ವರ್ಷದ 4 ತಿಂಗಳ ಗರ್ಭಿಣಿ ಕರುಣಾಜನಕ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ.

ಹೌದು… ಮಹಾಮಾರಿ ಕೊರೊನಾಗೆ ಮಹಾಲಕ್ಷ್ಮಿ ಲೇಔಟ್ ನ 34 ವರ್ಷದ 4 ತಿಂಗಳ ಗರ್ಭಿಣಿ ಸಾವನ್ನಪ್ಪಿದ್ದಾರೆ. ಕಳೆದ 9 ದಿನಗಳ ಹಿಂದೆ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೊರೊನಾ ಪರೀಕ್ಷೆ ಮಾಡಿದಾಗ ಸೋಂಕು ಇರುವುದು ದೃಢಪಟ್ಟಿದೆ. ಬೆಂಗಳೂರಿನ ಪ್ರತಿಷ್ಠಿತ ಕಂಪನಿಯಲ್ಲಿ ಸಾಫ್ಟ್ ವೇರ್ ಇಂಜಿನೀಯರ್ ಆಗಿ ಕೆಲಸ ಮಾಡುತ್ತಿದ್ದ ಇವರು ಮೊನ್ನೆ ಸಂಜೆ ಚೆನ್ನಾಗಿ ಮಾತನಾಡಿಕೊಂಡು ಇದ್ದರು.

ಸಂಬಂಧಿಕರು ವಿಡಿಯೋ ಕರೆ ಮಾಡಿದಾಗಲೆಲ್ಲಾ ಚೆನ್ನಾಗಿಯೇ ಮಾತನಾಡಿಕೊಂಡಿದ್ದ ಅವರಗೆ ನಿನ್ನೆ ಉಸಿರಾಟದ ತೊಂದರೆ ಅಧಿಕಗೊಂಡಿತ್ತು. ಯಾವುದೇ ಚಿಕಿತ್ಸೆ ಫಲಕಾರಿಯಾಗದೇ ಅರಳುವ ಮುನ್ನವೇ ಮಗು ಹಾಗೂ ಗರ್ಭಿಣಿ ಇಬ್ಬರೂ ಸಾವನ್ನಪ್ಪಿದ್ದಾರೆ. ಮಹಿಳೆಯನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

” ಇಂಥಹ ಸ್ಥಿತಿ ಯಾರಿಗೂ ಬರುವುದು ಬೇಡ. ಕೊರೊನಾ ಅಧಿಕವಾಗುತ್ತಿದೆ. ಇದಕ್ಕೆ ಕಠಿಣ ನಿಯಮಗಳನ್ನು ಜಾರಿಗೆ ತನ್ನಿ ” ಎಂದು ಕುಟುಂಬಸ್ಥರು ಮನವಿ ಮಾಡಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights