ಕೊರೊನಾ ಬಿಕ್ಕಟ್ಟು: 55 ವರ್ಷ ಮೇಲ್ಪಟ್ಟ ಪೊಲೀಸ್‌ ಸಿಬ್ಬಂದಿಗಳಿಗಿಲ್ಲ ಫೀಲ್ಡ್‌ ಡ್ಯೂಟಿ!

ಪೊಲೀಸ್ ಇಲಾಖೆ ಮತ್ತು ಕರ್ನಾಟಕ ರಾಜ್ಯ ಮೀಸಲು ಪಡೆಯ ಸಿಬ್ಬಂದಿಗಳಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಇತ್ತೀಚೆಗೆ, ಕರ್ನಾಟಕ ರಾಜ್ಯ ಮೀಸಲು ಪಡೆಯ 20 ಮಂದಿ ಪೊಲೀಸ್ ಸಿಬ್ಬಂದಿಗಳಿಗೆ ಕೊರೊನಾ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಐವತ್ತೈದು ವರ್ಷಕ್ಕೂ ಮೇಲ್ಪಟ್ಟ ಕೆಎಸ್‌ಆರ್‌ಪಿ ಸಿಬ್ಬಂದಿಗಳನ್ನು ಹೊರಗಡೆ ಕೆಲಸಕ್ಕೆ ನಿಯೋಜನೆ ಮಾಡದಂತೆ ಕೆಎಸ್‌ಆರ್‌ಪಿ ಮುಖ್ಯಸ್ಥ ಅಲೋಕ್ ಕುಮಾರ್ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿರುವ ಕೆಎಸ್‌ಆರ್‌ಪಿ ಸಿಬ್ಬಂದಿಯ ಪೈಕಿ ಅಧಿಕೃತವಾಗಿ ಇಪ್ಪತ್ತು ಮಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಇದರಲ್ಲಿ ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಉಳಿದವರು ಮನೆಯಲ್ಲಿ ಕ್ವಾರೆಂಟೈನ್‌ನಲ್ಲಿದ್ದರೆ, ಇನ್ನು ಕೇರಳ ಚುನಾವಣೆ ಕರ್ತವ್ಯಗೆ ತೆರಳಿದ್ದ ಅಸಿಸ್ಟೆಂಟ್ ಕಮಾಂಡೆಂಟ್ ಸೇರಿ ಎಂಟು ಮಂದಿಗೆ ಪಾಸಿಟಿವ್ ಕಾಣಿಸಿಕೊಂಡಿದೆ. ಕೊರೋನಾ ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ 55 ವರ್ಷ ಮೇಲ್ಪಟ್ಟ ಸಿಬ್ಬಂದಿಯನ್ನು ಹೊರಗಡೆ ಕೆಲಸಕ್ಕೆ ನಿಯೋಜನೆ ಮಾಡದಂತೆ ಎಡಿಜಿಪಿ ಅಲೋಕ್ ಕುಮಾರ್ ಸೂಚಿಸಿದ್ದಾರೆ.

ಹಿರಿಯ ಕೆಎಸ್‌ಆರ್‌ಪಿ ಸಿಬ್ಬಂದಿ ಕಚೇರಿ ಕ್ಯಾಂಪಸ್ ನಲ್ಲಿಯೇ ಕೆಲಸ ಮಾಡಲು ಸೂಚಿಸಲಾಗಿದೆ. ಇತ್ತೀಚೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಕೊರೋನಾ ಕಾಣಿಸಿಕೊಂಡಿತ್ತು. ಆನಂತರ, ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಸೇರಿದಂತೆ ಪೊಲೀಸರಲ್ಲಿ ಹೆಚ್ಚಾಗಿ ಕೊರೋನಾ ಕಾಣಿಸಿಕೊಂಡಿತ್ತು. ಹೀಗಾಗಿ ಎಲ್ಲಾ ಪೊಲೀಸ್ ಠಾಣೆ ಸ್ಯಾನಿಟೈಸ್ ಮಾಡುವ ಬಗ್ಗೆ ನಗರ ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದರು. ಇದೀಗ ಕರ್ನಾಟಕ ರಾಜ್ಯ ಪೊಲೀಸ್ ಮೀಸಲು ಪಡೆಯ ಸಿಬ್ಬಂದಿಯಲ್ಲಿ ಕೊರೋನಾ ಕಾಣಿಸಿಕೊಡಿರುವುದು ಅಧಿಕಾರಿಗಳಲ್ಲಿ ಕೂಡ ಆತಂಕ ಮೂಡಿಸಿದೆ.

ಇದನ್ನೂ ಓದಿ: ಮುನ್ಸೂಚನೆ ಇಲ್ಲದೆ ಲಾಕ್ಡೌನ್ : ದಿಢೀರ ನಿರ್ಧಾರದಿಂದ ವ್ಯಾಪಾರಿಗಳ ಆಕ್ರೋಶ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights