ರಾಜ್ಯದ ಎಲ್ಲಾ ವಯಸ್ಸಿನವರಿಗೂ ಉಚಿತ ಕೊರೊನಾ ಲಸಿಕೆ ನೀಡಬೇಕು: ಹೆಚ್‌ಡಿಕೆ ಆಗ್ರಹ

ಮೇ ತಿಂಗಳ 1 ರಿಂದ ‌18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲು ಕೇಂದ್ರ ಸರಕಾರ ತೆಗೆದುಕೊಂಡಿರುವ ತೀರ್ಮಾನದಂತೆ, ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಆರುವರೆ ಕೋಟಿ ಜನತೆಗೂ ಉಚಿತವಾಗಿ ಲಸಿಕೆಯನ್ನು ನೀಡುವ ಮೂಲಕ ನೆರವಿಗೆ ಧಾವಿಸಬೇಕೆಂದು ಮಾಜಿ ಸಿಎಂ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಈಗಾಗಲೇ ಜಾರ್ಖಂಡ್, ಗೋವಾ, ಛತ್ತೀಸ್‌ಘಡ, ಉತ್ತರ ಪ್ರದೇಶ, ಅಸ್ಸಾಂ, ಮಧ್ಯಪ್ರದೇಶ, ಕೇರಳ, ಬಿಹಾರ ಮತ್ತು ಸಿಕ್ಕಿಂನಲ್ಲಿ ಲಸಿಕೆಯನ್ನು ಉಚಿತವಾಗಿ ನೀಡುವುದಾಗಿ ಘೋಷಿಸಲಾಗಿದೆ. ಈಗ ಕರ್ನಾಟಕ ರಾಜ್ಯದಲ್ಲಿಯೂ ಸಹ ಇದೇ ಕ್ರಮ ಅನುಸರಿಸಬೇಕು‌ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಲ್ಲಿ ‌ನನ್ನ ಕೋರಿಕೆ ಎಂದಿದ್ದಾರೆ.

ಈಗಿನ ಸಂದರ್ಭದಲ್ಲಿ ಜನರು ಹಣ ಕೊಟ್ಟು ಲಸಿಕೆ ಪಡೆಯಲು ಸಾಧ್ಯವಿಲ್ಲ. ಹೀಗಾಗಿ ಸರಕಾರವೇ ಮುಂದೆ ಬಂದು 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುವ ತೀರ್ಮಾನವನ್ನು ಪ್ರಕಟಿಸಬೇಕೆಂಬುದು ‌ಆಗ್ರಹಿಸಿದ್ದಾರೆ.

ಸುಮಾರು ಒಂದು ಕೋಟಿ ಡೋಸ್ ಲಸಿಕೆ ಕೊಳ್ಳಲು 400 ಕೋಟಿ ರೂ ಮೀಸಲಿಡಲಾಗಿದೆ. ಸರಿಸುಮಾರು ₹2.50 ಲಕ್ಷ ಕೋಟಿ ಬಜೆಟ್ ಮಂಡನೆ ಮಾಡುವ ಸರಕಾರಕ್ಕೆ ಕನಿಷ್ಠ ಪಕ್ಷ ₹2 ಸಾವಿರ ಕೋಟಿ ಹಣವನ್ನು ಲಸಿಕೆ ಖರೀದಿ ಮಾಡಲು ಮೀಸಲಿಡುವುದರಿಂದ ಬೊಕ್ಕಸಕ್ಕೆ ಭಾರೀ ಹೊರೆಯಾಗದು ಎಂದು ಹೇಳಿದ್ದಾರೆ.

ಬಡವ-ಬಲ್ಲಿದನೆಂಬ ತಾರತಮ್ಯ ತೋರದೆ ರಾಜ್ಯದ ಎಲ್ಲಾ ಜನತೆಗೆ ಉಚಿತವಾಗಿ ಲಸಿಕೆ ನೀಡುವ ಮಹತ್ವದ ನಿರ್ಧಾರ ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ರಾಜ್ಯದ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುವಂತೆ ಒಂದುವರೆ ತಿಂಗಳ ಹಿಂದೆಯೇ ಸರ್ಕಾರಕ್ಕೆ ಸಲಹೆ ನೀಡಿದ್ದೆ. ಪಲ್ಸ್ ಪೋಲಿಯೋ ಲಸಿಕೆ ನೀಡಿದ ಮಾದರಿಯಲ್ಲಿ ಎಲ್ಲರಿಗೂ ಉಚಿತವಾಗಿ ಕೊರೋನಾ ಲಸಿಕೆ ನೀಡುವ ನಿರ್ಧಾರ ಕೈಗೊಂಡರೆ ಅದು ಅಭಿನಂದನಾರ್ ಎಂದಿದ್ದಾರೆ.

ಇದನ್ನೂ ಓದಿ: ನಡುರಸ್ತೆಯಲ್ಲಿ ಬಸ್‌ನಿಂದ ಜನರನ್ನಿಳಿಸಿದ್ದ ಜಿಲ್ಲಾಧಿಕಾರಿ; ಸ್ವತಃ‌ ನಿಯಮ ಉಲ್ಲಂಘನೆ; ಅವರು ಹೇಳಿದ್ದೇನು?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights