ಪಶ್ಚಿಮ ಬಂಗಾಳ; ಕೊರೊನಾದಿಂದ ಟಿಎಂಸಿ ಅಭ್ಯರ್ಥಿ ಸಾವು

ದೇಶದಲ್ಲಿ ತಾಂಡವವಾಡುತ್ತಿರುವ ಕೊರೊನಾದಿಂದಾಗಿ ಇಡೀ ದೇಶವೇ ತತ್ತರಿಸಿಹೋಗಿದೆ. ಪ್ರತಿದಿನವೂ ಸಾವಿರಾರು ಮಂದಿ ಸಾವನ್ನಪ್ಪುತ್ತಿದ್ದಾರೆ. ಈ ನಡುವೆ 05 ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುತ್ತಿದ್ದು, 04 ರಾಜ್ಯಗಳ ಚುನಾವಣೆ ಮುಗಿದಿವೆ. ಆದರೆ, ಚುನಾವಣಾ ಫಲಿತಾಂಶಕ್ಕೂ ಮುನ್ನವೇ ಕೊರೊನಾದಿಂದಾಗಿ ಇದೂವರೆಗೂ ಮೂವರು ಅಭ್ಯರ್ಥಿಗಳು ಸಾವನ್ನಪ್ಪಿದ್ದಾರೆ.

ಇಂದು ಪಶ್ಚಿಮ ಬಂಗಾಳದ ಖರ್ದಹ ನಗರದ ಟಿಎಂಸಿ ಅಭ್ಯರ್ಥಿ ಕಾಜಲ್ ಸಿನ್ಹಾ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಆರನೇ ಹಂತದ ಚುನಾವಣೆಯ ವೇಳೆ ಖರ್ದಹ ನಗರ ಕ್ಷೇತ್ರದಲ್ಲಿ ಮತದಾನ ನಡೆದಿದೆ. ಒಂದುವೇಳೆ ಚುನಾವಣಾ ಫಲಿತಾಂಶದಲ್ಲಿ ಅವರು ಗೆಲುವು ಸಾಧಿಸಿದರೆ, ಆ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು, ಕಾಜಲ್ ಸಿನ್ಹಾ ಸಾವಿಗೆ ಸಂತಾಪ ಸೂಚಿಸಿದ್ದಾರೆ.

ಅತ್ಯಂತ ದುಃಖಕರ ಹಾಗೂ ಆಘಾತದ ವಿಚಾರವಾಗಿದೆ. ಪಶ್ಚಿಮ ಬಂಗಾಳದ ಖರ್ದಹ ನಗರದ ಟಿಎಂಸಿ ಅಭ್ಯರ್ಥಿ ಕಾಜಲ್ ಸಿನ್ಹಾ ಅವರು ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಸಿನ್ಹಾ ಅವರು ತಮ್ಮ ಜೀವನವನ್ನು ಜನರ ಸೇವೆಗೆ ಅರ್ಪಿಸಿದರು ಮತ್ತು ದಣಿವರಿಯದ ಅಭಿಯಾನವನ್ನು ನಡೆಸಿದ್ದರು. ಪಕ್ಷದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ ಸದಸ್ಯರಾಗಿದ್ದರು. ಅವಕ ಕುಟುಂಬ ಹಾಗೂ ಅಭಿಮಾನಗಳಿಗೆ ಸಂತಾಪ ಸೂಚಿಸುತ್ತೇನೆಂದು ಹೇಳಿದ್ದಾರೆ.

ಈ ಹಿಂದೆ, ಬಂಗಾಳದ ಸಂಶೇರ್‌ಗಂಜ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರೆಜೌಲ್‌ ಹಕ್ ಅವರು ಕೊರೊನಾದಿಂದ ಸಾವನ್ನಪ್ಪಿದ್ದರು. ತಮಿಳುನಾಡಿನ ಶ್ರೀವಿಲ್ಲಿಪುಥೂರ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪಿಎಸ್‌ಡಬ್ಲೂ ಮಾಧವ ರಾವ್ ಅವರೂ ಕೂಡ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಕಾಂಗ್ರೆಸ್‌ ಅಭ್ಯರ್ಥಿ ಕೊರೊನಾದಿಂದ ಸಾವು; ಗೆದ್ದರೆ ಉಪ-ಚುನಾವಣೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights