ರಾಷ್ಟ್ರ ರಾಜಧಾನಿಗೆ ಮತ್ತೊಂದು ಶಾಕ್‌; ಲಾಕ್‌ಡೌನ್‌ ಒಂದು ವಾರ ವಿಸ್ತರಣೆ ಸಾಧ್ಯತೆ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ತೀವ್ರ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಈಗಾಗಲೇ ಕೊರೊನಾ ಹರಡುವಿಕೆ ಸೋಂಕಿಗೆಯ ನಿಯಂತ್ರಣಕ್ಕಾಗಿ ಲಾಕ್‌ಡೌನ್‌ ಜಾರಿಗೊಳಿಸಿದ್ದು, ಇದೀಗ ಲಾಕ್‌ಡೌನ್‌ಅನ್ನು ಮತ್ತೆ ಒಂದು ವಾರ ಮುಂದುವರೆಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ.

ದೆಹಲಿಯಲ್ಲಿ ನಿನ್ನೆಯೊಂದೇ ದಿನ 24,000 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಒಂದೇ ದಿನದಲ್ಲಿ ಅತಿ ಹೆಚ್ಚು ಅಂದರೆ 357 ಜನ ಸೋಂಕಿಗೆ ಬಲಿಯಾಗಿದ್ದಾರೆ. ಇದು ದೆಹಲಿ ಜನತೆಯನ್ನು ಇನ್ನಷ್ಟು ಆತಂಕಕ್ಕೆ ತಳ್ಳುವಂತೆ ಮಾಡಿದೆ. ಕ್ಷಣ ಕ್ಷಣಕ್ಕೂ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಇನ್ನಷ್ಟು ಕಠಿಣ ಕ್ರಮಕ್ಕೆ ಸರ್ಕಾರ ಮುಂದಾಗಿದೆ.

ದೆಹಲಿಯಲ್ಲಿ ಘೋಷಣೆಯಾಗಿರುವ ಲಾಕ್ ಡೌನ್ ನಾಳೆ ಬೆಳಿಗ್ಗೆ 6 ಗಂಟೆಗೆ ಮುಕ್ತಾಯವಾಗಲಿದ್ದು, ಈ ಮಧ್ಯೆ ಸೋಂಕಿತರ ಸಂಖ್ಯೆ ಜೊತೆಗೆ ಆಸ್ಪತ್ರೆಗಳಲ್ಲಿ ಮೆಡಿಕಲ್ ಆಕ್ಸಿಜನ್ ಕೊರತೆ ಕೂಡ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಒಂದು ವಾರ ಲಾಕ್ ಡೌನ್ ವಿಸ್ತರಿಸುವ ಸಾಧ್ಯತೆ ಇದೆ ಎಂದು ವರದಿಗಳು ಹೇಳುತ್ತಿವೆ.

ಇದನ್ನೂ ಓದಿ: ರಜೆ ಇಲ್ಲದೆ ಪೊಲೀಸ್ ಠಾಣೆಯ ಮುಂದೆ ಹಳದಿ ಕಾರ್ಯಕ್ರಮ ಮಾಡಿಕೊಂಡ ಮಹಿಳಾ ಕಾನ್‌ಸ್ಟೆಬಲ್!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights