ಮಾಜಿ ಸಂಸದ, ಕಾಂಗ್ರೆಸ್‌ ಹಿರಿಯ ಮುಖಂಡ ಎಸ್ಬಿ ಸಿದ್ನಾಳ ವಿಧಿವಶ!

ಬೆಳಗಾವಿ ಲೋಕಸಭೆ ಕ್ಷೇತ್ರದಿಂದ ನಾಲ್ಕು ಬಾರಿ ಸಂಸದರಾಗಿದ್ದ ಕಾಂಗ್ರೆಸ್‌ ಪಕ್ಷದ ಹಿರಿಯ ಮುಖಂಡ ಎಸ್.ಬಿ.‌ ಸಿದ್ನಾಳ ಅವರು ಮಂಗಳವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ.

85 ವರ್ಷದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.‌ ಹಲವು ತಿಂಗಳುಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಅವರು ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದರು. ಇಂದು ಬೆಳಗ್ಗೆ ತಮ್ಮ ನಿವಾಸದಲ್ಲಿಯೇ ವಿಧಿವಶರಾಗಿದ್ದಾರೆ.

ಎಸ್.ಬಿ.‌ಸಿದ್ನಾಳ ಅವರು ಮೂಲತಃ ಬೈಲಹೊಂಗಲ ತಾಲೂಕಿನ‌ ಸಂಪಗಾಂವ ಗ್ರಾಮದವರು. ಇವರ ತಂದೆ ಬಸಪ್ಪ ಸಿದ್ನಾಳ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದವರಾಗಿದ್ದ ಸಿದ್ದಾಳ ಅವರು ವಕೀಲರಾಗಿದ್ದರು. 1978ರಲ್ಲಿ ಬೆಳಗಾವಿಗೆ ಬಂದು 1979ರಲ್ಲಿ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿದ್ದರು.

ಕಾಂಗ್ರೆಸ್‌ ಬೆಂಬಲಿಗರಾಗಿದ್ದ ಇವರು 1972ರಲ್ಲಿ ಕಿತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಸೆಂಬ್ಲಿ ಚುನಾವಣೆಗೆ ಸ್ಪರ್ಧಿಸಿ ಸೋಲನುಭವಿಸಿದ್ದರು. ನಂತರ, ಬೆಳಗಾವಿ ಲೋಕಸಭಾ ಕ್ಷೇತ್ರದಿಂದ 1980ರಲ್ಲಿ ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾದರು.‌ ಬಳಿಕ 1984, 1989 ಹಾಗೂ 1991ರಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದರು. ನಂತರದ ಚುನಾವಣೆಗಳಲ್ಲಿ ಇವರಿಗೆ ಟಿಕೆಟ್ ಸಿಗಲಿಲ್ಲ.‌

ಕಳೆದ ಹಲವು ದಿನಗಳಿಂದ ವಯೋಸಹಜ ಆನರೋಗ್ಯ ಎದುರಿಸುತ್ತಿದ್ದ ಇವರು, ಮಂಗಳವಾರ ನಿಧನರಾಗಿದ್ದಾರೆ. ಅವರು ಶರೀರವನ್ನು ಬೈಲಹೊಂಗಲ ತಾಲೂಕಿನ‌ ಸಾಣೆಕೊಪ್ಪ ಗ್ರಾಮದ ಫಾರ್ಮ್‌ ಹೌಸ್ ನಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದ್ದು, ಸಂಜೆ 5 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಶಾಕಿಂಗ್ : ದೆಹಲಿಯಲ್ಲಿ 1,000 ಕ್ಕೂ ಹೆಚ್ಚು ಕೋವಿಡ್ ಶವಗಳು ಕಾಣೆ…!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights