ಮಹಾರಾಷ್ಟ್ರದ ಆಸ್ಪತ್ರೆಯಲ್ಲಿ ಮತ್ತೊಂದು ಬೆಂಕಿ ಅವಘಡ : ನಾಲ್ಕು ರೋಗಿಗಳು ದಾರುಣ ಸಾವು!

ಕೊರೊನಾ ಅಟ್ಟಹಾಸದ ಮಧ್ಯೆ ಅಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಮಹಾರಾಷ್ಟ್ರದ ಥಾಣೆ ಆಸ್ಪತ್ರೆಯಲ್ಲಿ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ನಾಲ್ಕು ರೋಗಿಗಳು ಸಾವನ್ನಪ್ಪಿದ್ದಾರೆ.

ಕಳೆದ ವಾರ ಐಸಿಯುನಲ್ಲಿದ್ದ ಹದಿನಾಲ್ಕು ಕರೋನವೈರಸ್ ರೋಗಿಗಳು ಥಾಣೆಯಿಂದ 50 ಕಿ.ಮೀ ದೂರದಲ್ಲಿರುವ ವಿರಾರ್ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿಯಲ್ಲಿ ಸಾವನ್ನಪ್ಪಿದ್ದರು. ಇದೇ ರೀತಿಯ ಘಟನೆ ಮಹಾರಾಷ್ಟ್ರದಲ್ಲಿ ಮರುಕಳಿಸಿದೆ.

ಹೌದು… ರಾಜ್ಯ ರಾಜಧಾನಿ ಮುಂಬೈನಿಂದ 28 ಕಿ.ಮೀ ದೂರದಲ್ಲಿರುವ ಮಹಾರಾಷ್ಟ್ರದ ಥಾಣೆ ಬಳಿಯ ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡು ನಾಲ್ಕು ರೋಗಿಗಳು ಮೃತಪಟ್ಟಿದ್ದಾರೆ. ಬೆಂಕಿಯಲ್ಲಿ ಇನ್ನೂ ಅನೇಕರು ಗಾಯಗೊಂಡಿದ್ದಾರೆ.

ಮುಂಬ್ರಾದ ಕೌಸಾದಲ್ಲಿರುವ ಪ್ರೈಮ್ ಕ್ರಿಟಿಕೇರ್ ಆಸ್ಪತ್ರೆಯಲ್ಲಿ ಮುಂಜಾನೆ 3.40 ರ ಸುಮಾರಿಗೆ ಸಂಭವಿಸಿದ ಬೆಂಕಿಯನ್ನು ಈಗ ನಿಯಂತ್ರಣಕ್ಕೆ ತರಲಾಗಿದೆ. ಮೂರು ಅಗ್ನಿಶಾಮಕ ವಾಹನಗಳು ಮತ್ತು ಐದು ಆಂಬುಲೆನ್ಸ್‌ಗಳು ಸ್ಥಳದಲ್ಲೇ ಬೀಡುಬಿಟ್ಟಿವೆ.

ಆಸ್ಪತ್ರೆಯಿಂದ ಇಪ್ಪತ್ತು ರೋಗಿಗಳನ್ನು ರಕ್ಷಿಸಲಾಗಿದ್ದು, ಅವರಲ್ಲಿ ಆರು ಮಂದಿ ಐಸಿಯುನಲ್ಲಿದ್ದರು ಎನ್ನಲಾಗುತ್ತಿದೆ. ಬೆಂಕಿಯು ಆಸ್ಪತ್ರೆಯ ಮೊದಲ ಮಹಡಿಯನ್ನು ಕಾಣಿಸಿಕೊಂಡಿದ್ದು ಈ ಮಹಡಿಯಲ್ಲಿ ಯಾವುದೇ ಕೋವಿಡ್ ರೋಗಿಗಳಿರಲಿಲ್ಲ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಬೆಂಕಿಯ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.

ಘಟನೆಯ ಬಗ್ಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಮಾಹಿತಿ ನೀಡಲಾಗಿದ್ದು, ಸಂತ್ರಸ್ತರ ಕುಟುಂಬಗಳಿಗೆ ತಲಾ 5 ಲಕ್ಷ  ಮತ್ತು ಗಾಯಾಳುಗಳಿಗೆ 1 ಲಕ್ಷ ಪರಿಹಾರನೀಡಲಾಗುವುದು ಎಂದು ಮಹಾರಾಷ್ಟ್ರ ಸಚಿವ ಜಿತೇಂದ್ರ ಅವದ್ ಹೇಳಿದ್ದಾರೆ.

ಬೆಂಕಿಯ ಕಾರಣದ ಬಗ್ಗೆ ತನಿಖೆ ನಡೆಸಲು ನಗರದ ನಾಗರಿಕ ಸಂಸ್ಥೆಯ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಮತ್ತು ವೈದ್ಯಕೀಯ ಅಧಿಕಾರಿಗಳನ್ನು ಒಳಗೊಂಡ ಉನ್ನತ ಮಟ್ಟದ ತನಿಖಾ ಸಮಿತಿಯನ್ನು ರಚಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights