ಲಾಕ್‌ಡೌನ್‌: ಬೆಂಗಳೂರಿನಲ್ಲಿ ಆಟೋ-ಟ್ಯಾಕ್ಸಿಯೂ ಬಂದ್‌; 150 BMTC ಬಸ್‌ಗಳು ಮಾತ್ರ ಸಂಚಾರ!

ರಾಜ್ಯದಲ್ಲಿ ಮಂಗಳವಾರ ರಾತ್ರಿಯಿಂದ ಲಾಕ್‌ಡೌನ್‌ ಘೋಷಿಸಲಾಗಿದೆ. ಆದರೆ, ಹಲವು ಕೈಗಾರಿಕಾ ಚಟುವಟಿಕೆಗಳು ಹಾಗೂ ಕಟ್ಟಡ ಕೆಲಸಗಳು ಮುಂದಿವರೆಯಲು ಅವಕಾಶವಿದೆ. ಹೀಗಾಗಿ, ಬೆಂಗಳೂರಿನಲ್ಲಿ ಆಟೋ, ಟ್ಯಾಕ್ಸಿಗಳೂ ಕೂಡ ಸಂಪೂರ್ಣ ಬಂದ್‌ ಆಗಿರುವುದರಿಂದ, ಈ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಕಾರ್ಮಿಕರು ಹಾಗೂ ಜನರು ಸಂಚರಿಸಲು ಅನುಕೂಲಕ್ಕಾಗಿ 150 ಬಿಎಂಟಿಸಿ ಬಸ್‌ಗಳನ್ನು ರಸ್ತೆಗಿಳಿಸಲು ಸಾರಿಗೆ ಸಂಸ್ಥೆ ನಿರ್ಧರಿಸಿದೆ.

ಬೆಳಿಗ್ಗೆ 6ರಿಂದ ರಾತ್ರಿ 7 ಗಂಟೆ ತನಕ ಈ ಬಸ್‌ಗಳು ಕಾರ್ಯಾಚರಣೆ ಮಾಡಲಿವೆ. ಕೆಂ‍ಪೇಗೌಡ ಬಸ್‌ ನಿಲ್ದಾಣದಿಂದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾರ್ಯಾಚರಣೆ ಮಾಡುವ 6 ಬಸ್‌ಗಳು ದಿನದ 24 ಗಂಟೆಯೂ ಕಾರ್ಯಾಚರಣೆ ಮಾಡಲಿವೆ ಎಂದು ಬಿಎಂಟಿಸಿ ತಿಳಿಸಿದೆ.

ಉಳಿದಂತೆ ಸಾಮಾನ್ಯ ಬಸ್‌ಗಳು ಶಿವಾಜಿನಗರ, ಕೆಂಪೇಗೌಡ ಬಸ್ ನಿಲ್ದಾಣ, ಮಲ್ಲೇಶ್ವರ, ಹಂಪಿನಗರ, ಬನಶಂಕರಿ, ಕೆ.ಆರ್‌. ಮಾರುಕಟ್ಟೆ, ಕೆಂಗೇರಿ, ಹೆಬ್ಬಾಳ, ಬೊಮ್ಮನಹಳ್ಳಿ, ಯಶವಂತಪುರ, ಶ್ರೀನಗರ, ಶಾಂತಿನಗರದ ನಿಲ್ದಾಣಗಳಿಂದ ನಗರದ ವಿವಿಧೆಡೆಗೆ ಸಂಚರಿಸಲಿವೆ.

ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ಸಂಪೂರ್ಣ ಸ್ಥಗಿತವಾಗಲಿದೆ. ಆದರೆ, ವಿಮಾನ ನಿಲ್ದಾಣದಿಂದ ಫ್ಲೈಬಸ್‌ಗಳ ಸಂಚಾರ ಮಾತ್ರ ಇರಲಿದೆ. ಆಟೋರಿಕ್ಷಾ ಮತ್ತು ಟ್ಯಾಕ್ಸಿಗಳ ಸಂಚಾರ ಸಂಪೂರ್ಣ ಸ್ಥಗಿತವಾಗಲಿದೆ.

ಗಾರ್ಮೆಂಟ್ಸ್ ಕಾರ್ಖಾನೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಉತ್ಪಾದನಾ ಚಟುವಟಿಕೆಗಳು ಕಾರ್ಯನಿರ್ವಹಿಸಲಿದೆ. ಕೋವಿಡ್ ಮಾತ್ರವಲ್ಲದೇ ಬೇರೆ ಕಾಯಿಲೆಗಳಿಂದ ಬಳಲುತ್ತಿರುವ ಜನ ಕೂಡ ಆಸ್ಪತ್ರೆಗಳಿಗೆ ಅಲೆದಾಡಬೇಕಿದೆ. ಬಿಎಂಟಿಸಿ ಕಲ್ಪಿಸಿರುವ 150 ಬಸ್‌ಗಳ ಸೇವೆ ಸಾಲದು ಕೆಲಸಕ್ಕೆ ತೆರಳಲು ಬಿಎಂಟಿಸಿ ಮತ್ತು ಮೆಟ್ರೊ ನಂಬಿಕೊಂಡಿದ್ದ ಜನ ಪರದಾಡಬೇಕಾಗಿದೆ ಎಂದು ಅಭಿಪ್ರಾಯಗಳು ವ್ಯಕ್ತವಾತಗಿವೆ.

ಸಂಚಾರಕ್ಕೆ ನಿರ್ಬಂಧ ಇದ್ದರೂ ಕೆಲಸ ಮಾಡುತ್ತಿರುವ ಕಂಪನಿಯ ಗುರುತಿನ ಚೀಟಿ ತೋರಿಸಿದರೆ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆದರೆ, ಕಟ್ಟಡ ಕಾರ್ಮಿಕರು ಯಾವ ಗುರುತಿನ ಚೀಟಿಯನ್ನೂ ಹೊಂದಿಲ್ಲದ ಹಿನ್ನೆಲೆಯಲ್ಲಿ ಅವರ ಪರಿಸ್ಥಿತಿ ಏನು ಎಂಬ ಪ್ರಶ್ನೆ ಎದುರಾಗಿದೆ.

Read Also: ರಾಜ್ಯದಲ್ಲಿ ಸರ್ಕಾರಿ ನೌಕರರ ವೇತನ ಕಡಿತ ವದಂತಿ; ಸ್ಪಷ್ಟನೆ ನೀಡಿದ ನೌಕರರ ಸಂಘದ ಅಧ್ಯಕ್ಷ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights