ಬಿಜೆಪಿ ನಾಯಕ ಸುಶೀಲ್ ಮೋದಿ ಅವರ ಕಿರಿಯ ಸಹೋದರ ಕೊರೊನಾಗೆ ಬಲಿ!

ಬಿಹಾರದ ಮಾಜಿ ಉಪಮುಖ್ಯಮಂತ್ರಿ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಸುಶೀಲ್ ಕುಮಾರ್ ಮೋದಿ ಅವರ ಕಿರಿಯ ಸಹೋದರ ಅಶೋಕ್ ಕುಮಾರ್ ಇಂದು  ಕೊರೊನಾಗೆ ಬಲಿಯಾಗಿದ್ದಾರೆ.

“ನನ್ನ ಕಿರಿಯ ಸಹೋದರ ಅಶೋಕ್ ಕುಮಾರ್ ಮೋದಿ (65) ಕೊರೋನಾದಿಂದ ಮಧ್ಯಾಹ್ನ 2.45 ಕ್ಕೆ ಪಾಟ್ನಾದಲ್ಲಿ ನಿಧನರಾದರು. ವೈದ್ಯರು ಎಲ್ಲಾ ಪ್ರಯತ್ನಗಳನ್ನು ಮಾಡಿದರು ಆದರೆ ನಮಗೆ ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ” ಎಂದು ಬಿಜೆಪಿ ನಾಯಕ ಸುಶೀಲ್ ಮೋದಿ ಟ್ವೀಟ್ ಮಾಡಿದ್ದಾರೆ.

ರಾಜ್ಯ ರಾಜಧಾನಿ ಪಾಟ್ನಾ ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಹೆಚ್ಚು ಹಾನಿಗೊಳಗಾಗಿದೆ. ಪ್ರತಿದಿನ 3,000 ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸುತ್ತಿದೆ. ಇದಕ್ಕೂ ಮುನ್ನ ಶನಿವಾರ ಬಿಹಾರದಲ್ಲಿ 13,789 ಹೊಸ ಪ್ರಕರಣಗಳು ವರದಿಯಾಗಿದ್ದು, ಇದು 4,84,106 ಕ್ಕೆ ತಲುಪಿದೆ.

ಕಳೆದ ವರ್ಷ ಸಾಂಕ್ರಾಮಿಕ ರೋಗ ಹರಡಿದ ನಂತರ ಬಿಹಾರದಲ್ಲಿ 2,600 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ.ಬಿಹಾರದಲ್ಲಿ ಪ್ರಸ್ತುತ ಒಂದು ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿದ್ದು, ಶನಿವಾರ 10,000 ಕ್ಕೂ ಹೆಚ್ಚು ಜನರು ಚೇತರಿಸಿಕೊಂಡಿದ್ದಾರೆ.

ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಈ ವಾರದಲ್ಲಿ ರಾಜ್ಯದಲ್ಲಿ ಕೋವಿಡ್ -19 ಪ್ರಕರಣಗಳ ಉಲ್ಬಣವನ್ನು ಗಮನದಲ್ಲಿಟ್ಟುಕೊಂಡು ಉನ್ನತ ಮಟ್ಟದ ಸಭೆ ನಡೆಸಿ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಉಚಿತ ವ್ಯಾಕ್ಸಿನೇಷನ್ ಅಭಿಯಾನವನ್ನು ಪ್ರಾರಂಭಿಸಲು ಸೂಕ್ತ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights