ಕೊರೊನಾ ಮಧ್ಯೆ ರಾಜ್ಯದಲ್ಲಿಂದು ಉಪಚುನಾವಣೆ ಫಲಿತಾಂಶ : ಯಾರದ್ದು ಮೇಲುಗೈ?

ಸಾಂಕ್ರಾಮಿಕ ರೋಗದ ಮಧ್ಯೆ ಇಂದು ಉಪಚುನಾವಣೆ ಫಲಿತಾಂಶ ಪ್ರಕಟಣೆಗೊಳ್ಳಲಿದ್ದು ಮತೆಣಿಕೆ ಆರಂಭವಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರ, ರಾಯಚೂರಿನ ಮಸ್ಕಿ ವಿಧಾನಸಭಾ ಕ್ಷೇತ್ರ ಹಾಗೂ ಬೀದರ್ ನ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಇಂದು ಪ್ರಕಟಗೊಳ್ಳಲಿದ್ದು, 30 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ಹೌದು… ಇಂದು 8 ಗಂಟೆಯಿಂದಲೇ ಮತ ಎಣಿಕೆ ಆರಂಭಗೊಂಡಿದ್ದು, ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್, ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆಯಲ್ಲಿದೆ. ಇಂದು ಮಧ್ಯಾಹ್ನದ ಒಳಗೆ ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆ ಇದೆ.

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸುರೇಶ್ ಅಂಗಡಿ ಅವರ ಪತ್ನಿ ಮಂಗಲಾ ಅಂಗಡಿ ಅವರು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಕಾಂಗ್ರೆಸ್​​ನಿಂದ ಸತೀಶ್ ಜಾರಕಿಹೊಳಿ ಕಣಕ್ಕಿಳಿದಿದ್ದು ಅಧಿಕ ಮತಗಳಿಂದ ಮುನ್ನಡೆಯುತ್ತಿದ್ದಾರೆ. ಇವರಿಬ್ಬರ ಮಧ್ಯೆ ನೇರ ಪೈಪೋಟಿ ಇದೆ.

ಇನ್ನೂ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಪ್ರತಾಪ್ ಗೌಡ ಪಾಟೀಲ್ ಹಾಗೂ ಕಾಂಗ್ರೆಸ್ ಪಕ್ಷದಿಂದ ಬಸನಗೌಡ ಪಾಟೀಲ ತುರ್ವಿಹಾಳ ಅವರು ಇಲ್ಲಿ ಪ್ರಧಾನ ಸ್ಪರ್ಧಾಳುಗಳಾಗಿ ಸ್ಪರ್ಧೆಯಲ್ಲಿದ್ದಾರೆ. 500 ಅಧಿಕ ಮತಗಳ ಅಂತರದಲ್ಲಿ ಮುನ್ನಡೆಯುತ್ತಿದ್ದಾರೆ.

ಜೊತೆಗೆ ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಶರಣು ಸಲಗರ ಹಾಗೂ ಕಾಂಗ್ರೆಸ್​ನಿಂದ ಮಾಲಾ ಬಿ ಅವರು ಸ್ಪರ್ಧಿಸಿದ್ದಾರೆ. ಜೆಡಿಎಸ್​ನಿಂದ ಸೈಯದ್ ಯಸ್ರಬ್ ಅಲಿ ಖಾದ್ರಿ ಕಣದಲ್ಲಿದ್ದರೆ, ಮಲ್ಲಿಕಾರ್ಜುನ ಖೂಬಾ ಅವರು ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸೆಡ್ಡು ಹೊಡೆದಿದ್ದಾರೆ.

 

Spread the love

Leave a Reply

Your email address will not be published. Required fields are marked *