ಮಸ್ಕಿಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು: 26 ಸಾವಿರ ಮತಗಳ ಅಂತರದಲ್ಲಿ ಸೋಲುಂಡ BJP!

ತೀವ್ರ ಕುತೂಹಲ ಕೆರಳಿಸಿದ್ದಂತ ಮಸ್ಕಿ ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರವಿಹಾಳ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್‌ ವಿರುದ್ದ ಸುಮಾರು 26,000 ಮತಗಳ ಅಂತರದಲ್ಲಿ ಬಸನಗೌಡ ಗೆಲುವು ಸಾಧಿಸಿದ್ದಾರೆ.

ಮಸ್ಕಿ ವಿಧಾನಸಭಾ ಉಪ ಚುನಾವಣೆಯ 12 ಸುತ್ತಿನ ಮತಏಣಿಕೆಯ ನಂತರ ಫಲಿತಾಂಶ ಪ್ರಕಟವಾಗಿದ್ದು, ಅಷ್ಟೂ ಸುತ್ತುಗಳಲ್ಲಿಯೂ ಮುನ್ನಡೆಯಲ್ಲಿದ್ದ ಬಸನಗೌಡ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಗೆಲುವು ಸಾಧಿಸಿರುವ ಕಾಂಗ್ರೆಸ್‌ ಅಭ್ಯರ್ಥಿ ಬಸನಗೌಡ ತುರವಿಹಾಳ ಒಟ್ಟು 47,089 ಮತಗಳನ್ನ ಪಡೆದುಕೊಂಡಿದ್ದರೆ, ಬಿಜೆಪಿಯಿಂದ ಸ್ಪರ್ಧಿಸಿದ್ದ ಪ್ರತಾಪಗೌಡ 28,966 ಮತಗಳನ್ನು ಪಡೆದು ಸೋಲುಂಡಿದ್ದಾರೆ.

ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ವಿಫಲತೆಯ ವಿರುದ್ದ ಜನರು ಬೇಸರಗೊಂಡಿದ್ದು, ಬಿಜೆಪಿ ವಿರುದ್ದ ಕ್ಷೇತ್ರದ ಜನರು ಮತಚಲಾಯಿಸಿದ್ದಾರೆ ಎಂದು ಅಭಿಪ್ರಾಯಗಳು ಕೇಳಿಬಂದಿವೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights