ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಕೋವಿಡ್ ಡ್ಯೂಟಿಗಾಗಿ ಕರೆ!

ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಕೋವಿಡ್ ಕೆಲಸಕ್ಕಾಗಿ ಕರೆಯಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಭಾನುವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಭೆಯಲ್ಲಿ ಕೊರೊನವೈರಸ್ ವಿರುದ್ಧ ಹೋರಾಡಲು ಭಾರತದ ಪ್ರತಿಕ್ರಿಯೆಯನ್ನು ಹೆಚ್ಚಿಸಲು ವೈದ್ಯಕೀಯ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬಹುದು ಎಂದು ಚರ್ಚಿಸಲಾಗಿದೆ.

ಕೋವಿಡ್-19 ಪ್ರಕರಣಗಳ ಉಲ್ಬಣವನ್ನು ತಡೆಗಟ್ಟುವ ಪ್ರಯತ್ನಗಳನ್ನು ಪರಿಶೀಲಿಸಲು ಮತ್ತು ಜನರ ಆರೋಗ್ಯ ವ್ಯವಸ್ಥೆಯನ್ನು ಕಾಪಾಡುವಲ್ಲಿ ದೇಶಕ್ಕೆ ಮಾನವ ಸಂಪನ್ಮೂಲದ ಅವಶ್ಯಕತೆ ಇದೆ.

ಹೀಗಾಗಿ ದೇಶದಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗದ ಪರಿಣಾಮಕಾರಿ ನಿರ್ವಹಣೆಗಾಗಿ ಮಾನವ ಸಂಪನ್ಮೂಲವನ್ನು ಹೆಚ್ಚಿಸುವ ಮಾರ್ಗಗಳನ್ನು ಸಭೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್, ಆರೋಗ್ಯ ಕಾರ್ಯದರ್ಶಿ ಮತ್ತು ಇತರ ಅಧಿಕಾರಿಗಳೊಂದಿಗೆ ಪ್ರಧಾನಿ ಪರಿಶೀಲಿಸಿದ್ದಾರೆ.

“ಸಭೆಯಲ್ಲಿ ಕೋವಿಡ್ ಕರ್ತವ್ಯಕ್ಕೆ ಸೇರಲು ವೈದ್ಯಕೀಯ ಮತ್ತು ನರ್ಸಿಂಗ್ ಕೋರ್ಸ್‌ಗಳ ಉತ್ತೀರ್ಣರನ್ನು ಉತ್ತೇಜಿಸಲು ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ, ಅದರ ವಿವರಗಳು ನಾಳೆ ಹೊರಬರುತ್ತವೆ” ಎಂದು ಮೂಲಗಳು ತಿಳಿಸಿವೆ.

ಕೋವಿಡ್-19 ಪ್ರಕರಣಗಳ ಉಲ್ಬಣದಿಂದಾಗಿ ದೇಶದ ಕೆಲವು ಭಾಗಗಳಲ್ಲಿ ಆರೋಗ್ಯ ಸಿಬ್ಬಂದಿಗಳ ಕೊರತೆ ಎದುರಾಗುತ್ತಿದೆ ಎಂಬ ವರದಿಗಳ ಮಧ್ಯೆ ಈ ಸಭೆ ನಡೆದಿದ್ದು, ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳ ಪರೀಕ್ಷಾ ಸೌಲಭ್ಯಗಳು ಸಹ ಕುಂಠಿತಗೊಂಡಿವೆ. ಹೀಗಾಗಿ ಅವರನ್ನು ಕೋವಿಡ್ ಕೆಲಸಕ್ಕಾಗಿ ಬಳಸಿಕೊಳ್ಳಬಹುದು ಎಂದು ಚರ್ಚಿಸಲಾಗಿದೆ.

ಶನಿವಾರ, ದೆಹಲಿಯ ಬಾತ್ರಾ ಆಸ್ಪತ್ರೆಯಲ್ಲಿ ವೈದ್ಯಕೀಯ ಆಮ್ಲಜನಕ ಕೊರತೆಯಿಂದ ಸಾವನ್ನಪ್ಪಿದ 12 ಜನರಲ್ಲಿ ವೈದ್ಯರೊಬ್ಬರು ಸೇರಿದ್ದಾರೆ. ಒಂದು ವಾರದ ಅವಧಿಯಲ್ಲಿ ಎರಡನೇ ಬಾರಿಗೆ ರಾಜಧಾನಿಯ ಖಾಸಗಿ ಆಸ್ಪತ್ರೆಯ ವೈದ್ಯರು ತೀವ್ರ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡರು.

ಸಾಂಕ್ರಾಮಿಕ ರೋಗವನ್ನು ತನ್ನ ಮೊದಲ ಆದ್ಯತೆಯನ್ನಾಗಿ ಮಾಡುವ ಬದಲು ರಾಜ್ಯ ಚುನಾವಣೆಗಳತ್ತ ಗಮನ ಹರಿಸಿದ್ದಾರೆ ಎಂದು ಪಿಎಂ ಮೋದಿ ಟೀಕಿಸಿದ್ದಾರೆ. ಹೀಗಾಗಿ ಇಂಥಹ ನಿರ್ಧಾರಗಳನ್ನು ಸರ್ಕಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights