ಪಂಚರಾಜ್ಯ ಫಲಿತಾಂಶ: ಅಸ್ಸಾಂನಲ್ಲಿ BJP; ಕೇರಳದಲ್ಲಿ LDF ಆರಂಭಿಕ ಮುನ್ನಡೆ; ಉಳಿದ ರಾಜ್ಯಗಳ‌ ಕತೆ ಏನು??

ಐದು ರಾಜ್ಯಗಳ ವಿಧಾನಸಭೆ ಚುನಾವಣಾ ಮತ ಎಣಿಕೆ ಭಾನುವಾರ ಬೆಳಗ್ಗೆಯಿಂದಲೇ ಆರಂಭವಾಗಿದೆ. ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪುದುಚೇರಿ ರಾಜ್ಯಗಳ ರಾಜಕೀಜ ಭವಿಷ್ಯ ಇಂದು ನಿರ್ಧಾರವಾಗಲಿದೆ.

ಈಗಗಲೇ ಮತ ಎಣಿಕೆ ಆರಂಭವಾಗಿದ್ದು, ಅಸ್ಸಾಂನಲ್ಲಿ‌ ಬಿಜೆಪಿ 11ಕ್ಷೇತ್ರಗಳಲ್ಲಿ ಆರಂಭಿಕ ಮುನ್ನಡೆ ಸಾಧಿಸಿದ್ದರೆ, ಕೇರಳದಲ್ಲಿ ಸಿಎಂ ಪಿಣರಾಯಿ ವಿಜಯನ್ ನೇತೃತ್ವದ CPM 56 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಎರಡೂ ರಾಜ್ಯಗಳಲ್ಲಿಯೂ ಕಾಂಗ್ರೆಸ್ ಎರಡನೇ ಸ್ಥಾನದಲ್ಲಿ ಮುನ್ನಡೆಯುತ್ತಿದೆ.

ಸಿಎಎ, ಎನ್‌ಆರ್‌ಸಿ ವಿರುದ್ಧ ಭಾರೀ ಪ್ರತಿಭಟನೆಗೆ ಕಾರಣವಾಗಿದ್ದ ಅಸ್ಸಾಂನಲ್ಲಿ, ಅದೇ ಸಿಎಎ ಕಾಯ್ದೆಯೇ ಬಿಜೆಪಿ ಅಧಿಕಾರಕ್ಕೆ ಬರಲು ವರದಾನವಾಗಲಿದೆ ಎಂದು ಹೇಳಲಾಗುತ್ತಿದ್ದು, ಇದೀಗ ಬಿಜೆಪಿ ಆರಂಭಿಕ ಮುನ್ನಡೆಯಲ್ಲಿದ್ದು, ಅಸ್ಸಾಂನಲ್ಲಿ ಅಧಿಕಾರವನ್ನು ಮರಳಿ ಪಡೆಯುವ ಉತ್ಸಾಹದಲ್ಲಿದೆ.

ಕೇರಳದಲ್ಲಿ ಆಡಳಿತಾರೂಢ ಎಡಪಕ್ಷ ಮತ್ತು ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷದ ನಡುವೆ ಪ್ರಬಲ ಸ್ಪರ್ಧೆ ಇದೆ. ಕಳೆದ ಎರಡು ಚುನಾವಣೆಗಳಿಂದ ಎರಡೂ ಪಕ್ಷಗಳೇ ಅಧಿಕಾರವನ್ನು ಹಂಚಿಕೊಳ್ಳುತ್ತಿವೆ.

ಬಿಜೆಪಿ ಮತ್ತು ಟಿಎಂಸಿ ಪಕ್ಷಗಳ‌ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಪಶ್ಷಿಮ ಬಂಗಾಳದ ಅಧಿಕಾರ ಯಾರ ಕೈ ಸೇರಲಿದೆ ಎಂಬ ಕಾತುರ ದೇಶದೆಲ್ಲಡೆ ಮನೆ ಮಾಡಿದೆ. ಟಿಎಂಸಿ 51 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹ್ಯಾಟ್ರಿಕ್ ಜಯದ ನಿರೀಕ್ಷೆಯಲ್ಲಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಹೊಸ ಹಾದಿ ನಿರ್ಮಿಸುವ ಭರವಸೆ ಹೊಂದಿದೆ.

ತಮಿಳುನಾಡು ರಾಜ್ಯದಲ್ಲಿ ಎಐಎಡಿಎಂಕೆ ಪಕ್ಷವು ಜಯಲಲಿತಾ ನಿಧನದ ಬಳಿಕ ಡಿಎಂಕೆ-ಕಾಂಗ್ರೆಸ್ ಮೈತ್ರಿಕೂಟವನ್ನು ಮೊದಲ ಬಾರಿಗೆ ಎದುರಿಸುತ್ತಿದೆ. ಡಿಎಂಕೆ 16 ಕ್ಷೇತ್ರಗಳಲ್ಲಿ ಆರಂಭಿಕ ಮುನ್ನಡೆಯಲ್ಲಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಒಂದಾಗಿದ್ದ ಡಿಎಂಕೆ-ಕಾಂಗ್ರೆಸ್ ರಾಜ್ಯದಲ್ಲಿಯೂ ಅಧಿಕಾರದ ನಿರೀಕ್ಷೆಯಲ್ಲಿದ್ದಾರೆ.

ಪುದುಚೇರಿಯಲ್ಲಿ ಬಿಜೆಪಿ ಅಧಿಕಾರ ಪಡೆಯುವ ನಿರೀಕ್ಷೆಯಲ್ಲಿದೆ.

ಕೇಂದ್ರಾಡಳಿತ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಂಡ ಬಳಿಕ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿತ್ತು. ಪುದುಚೇರಿ ಕಾಂಗ್ರೆಸ್ ಪ್ರಭಾವವಿರುವ ಕ್ಷೇತ್ರ. ಆದರೆ, ಈ ಬಾರಿ ಎಲ್ಲಾ ಲೆಕ್ಕಾಚಾರ ಬೇರೆಯಾಗಿದ್ದು, ಬಿಜೆಪಿ ಎಐಎನ್‌ಆರ್‌ಸಿ ಮುನ್ನಡೆಸುವ ಮೈತ್ರಿಕೂಟದ ಜೊತೆ ಸೇರಿದೆ.

 

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights