ದೇಶದಲ್ಲಿ ಮುಂದುವರೆದ ಕೊರೊನಾ ಹಾವಳಿ- 3.9 ಲಕ್ಷ ಹೊಸ ಕೇಸ್ : 3,689 ಬಲಿ!

ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು ಕಳೆದ 24 ಗಂಟೆಗಳಲ್ಲಿ 3.9 ಲಕ್ಷ ಹೊಸ ಪ್ರಕರಣಗಳು ದಾಖಲಾಗಿವೆ. 3,689 ಸಾವುಗಳು ಸಂಭವಿಸಿವೆ.

ದೇಶದಲ್ಲಿ ದಾಖಲೆಯ 3,92,488 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 3,689 ಮಂದಿ ಸಾವು ಸಂಭವಿಸಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,95,57,457ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 2,15,542ಕ್ಕೆ ತಲುಪಿದೆ.

ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 33,49,644ಕ್ಕೆ ಏರಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 3,07,865 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 1,59,92,271ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ ದಿನ 18,04,954 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 29,01,42,339 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಕಳೆದ ಕೆಲವು ತಿಂಗಳುಗಳಿಂದ ಭಾರತವು ಕೋವಿಡ್ -19 ಪ್ರಕರಣಗಳಲ್ಲಿ ಭಾರಿ ಏರಿಕೆ ಕಂಡಿದೆ. ಕೊರೋನವೈರಸ್ ವಿರುದ್ಧ ಹೋರಾಡಲು ದೇಶಕ್ಕೆ ಸಹಾಯ ಮಾಡಲು ಪ್ರಪಂಚದಾದ್ಯಂತ ದೇಶಗಳು ಸಹಾಯಕ್ಕೆ ಮುಂದಾಗಿವೆ. ಆಮ್ಲಜನಕ ಮತ್ತು ಇತರ ವೈದ್ಯಕೀಯ ಸಾಮಗ್ರಿಗಳನ್ನು ಹೊತ್ತ ಉಜ್ಬೇಕಿಸ್ತಾನ್‌ನಿಂದ ಒಂದು ವಿಮಾನ ಭಾನುವಾರ ಮುಂಜಾನೆ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ಯುಎಸ್‌ನಿಂದ ಮತ್ತೊಂದು ವಿಮಾನವು 1,000 ಕ್ಕೂ ಹೆಚ್ಚು ಆಮ್ಲಜನಕ ಸಿಲಿಂಡರ್‌ಗಳು ಮತ್ತು ಇತರ ವೈದ್ಯಕೀಯ ಉಪಕರಣಗಳನ್ನು ಹೊತ್ತು ಬಂದಿತು.

ಅಲ್ಲದೆ, ಆಸ್ಪತ್ರೆಯ ಮಟ್ಟದ ಎಂಟು ಆಮ್ಲಜನಕ ಉತ್ಪಾದಕಗಳು ಮತ್ತು ಇತರ ವೈದ್ಯಕೀಯ ಸಾಮಗ್ರಿಗಳು ಸೇರಿದಂತೆ 28 ಟನ್ ವೈದ್ಯಕೀಯ ಉಪಕರಣಗಳು ಫ್ರಾನ್ಸ್‌ನಿಂದ ಆಗಮಿಸಿವೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights