ನಂದಿಗ್ರಾಮದಲ್ಲಿ ಗೆಲ್ಲಲೇಬೇಕೆಂದು ಪಣತೊಟ್ಟ ಮಮತಾ ಬ್ಯಾನರ್ಜಿಗೆ ಸಿಕ್ತು ಜಯ..!

ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ಸುವೇಂದು ಅಧಿಕಾರಿಯನ್ನು ಸೋಲಿಸುತ್ತೇನೆ ಎಂದು ಪ್ರತಿಜ್ಞೆ ಮಾಡಿದ್ದ ಮಮತಾ ಬ್ಯಾನರ್ಜಿ ಯಶಸ್ವಿಯಾಗಿದ್ದಾರೆ. ನಂದಿಗ್ರಾಮದಲ್ಲಿ ಮಾತ್ರವೇ ಸ್ಪರ್ಧಿಸಿದ್ದ ಮಮತಾ ಬ್ಯಾನರ್ಜಿ 1,200ಕ್ಕೂ ಹೆಚ್ಚು ಮತಗಳಿಂದ ಜಯಗಳಿಸಿದ್ದಾರೆ.

ಸದ್ಯದ ಟ್ರೆಂಡ್ ಪ್ರಕಾರ ಬಂಗಾಳ ವಿಧಾನಸಭೆಯ ಒಟ್ಟು 292 ಸ್ಥಾನಗಳ ಪೈಕಿ 205 ಕ್ಷೇತ್ರಗಳಲ್ಲಿ ಟಿಎಂಟಿ ಮುನ್ನಡೆಯಲ್ಲಿದ್ದು, 84 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆಯಲ್ಲಿದೆ.

ಟಿಎಂಸಿಯಿಂದ ಹೊರ ಬಂದು ಬಿಜೆಪಿ ಸೇರಿದ್ದ ಸುವೇಂದು ಅಧಿಕಾರಿ ಮತ್ತು ಮಮತಾ ಬ್ಯಾನರ್ಜಿ ಮಧ್ಯೆ ಭಾರೀ ಸ್ಪರ್ಧೆ ನಡೆದಿತ್ತು. ಮತಿ ಎಣಿಕೆಯ ಆರಂಭದಿಂದ ಕೊನೆಯವರೆಗೂ ಈ ಕ್ಷೇತ್ರ ಬಾರಿ ಕುತೂಹಲ ಮೂಡಿಸಿತ್ತು. ಒಮ್ಮೆ ಮಮತಾ ಮುನ್ನಡೆ ಪಡೆದರೆ ಮತ್ತೊಂದು ಸುತ್ತಿನಲ್ಲಿ ಸುವೇಂದು ಅಧಿಕಾರಿ ಮುನ್ನಡೆ ಸಾಧಿಸುತ್ತಿದ್ದರು.

ಈಗಾಗಲೇ ಅಸ್ಸಾಂ, ತಮಿಳುನಾಡು, ಕೇರಳ, ಪುದುಚೆರಿಯಲ್ಲಿ ಚುನಾವಣೆ ನಡೆದಿದ್ದು, ಇಂದು ಮತಎಣಿಕೆ ಪೂರ್ಣಗೊಂಡು ಫಲಿತಾಂಶ ಪ್ರಕಟವಾಗಲಿದೆ. ಇಂದು ಸಂಜೆ ವೇಳೆಗೆ ಯಾವ ರಾಜ್ಯದಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ಬಗ್ಗೆ ನಿಖರ ಚಿತ್ರಣ ಸಿಗಲಿದೆ. ಅಸ್ಸಾಂ ಚುನಾವಣೆ ಸಾಕಷ್ಟು ಮಹತ್ವ ಪಡೆದುಕೊಂಡಿದ್ದರೆ, ದಕ್ಷಿಣದಲ್ಲಿ ತಮಿಳುನಾಡು-ಪುದುಚೇರಿ ಮತ್ತು ಕೇರಳದ ಚುನಾವಣೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಹೀಗಾಗಿ ಎಲ್ಲಿ? ಯಾರು ಸರ್ಕಾರ ರಚಿಸಲಿದ್ದಾರೆ? ಎಂಬ ಕುರಿತು ಸಾಕಷ್ಟು ಕುತೂಹಲ ಹುಟ್ಟಿಕೊಂಡಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights