ಬಂಗಾಳದಲ್ಲಿ TMC ಮ್ಯಾಜಿಕ್ ನಂಬರ್‌ನಲ್ಲಿ ಮುನ್ನಡೆ; ಆದರೆ, ಮಮತಾ ಬ್ಯಾನರ್ಜಿಗೆ ಭಾರೀ ಹಿನ್ನೆಡೆ!
ಐದು ರಾಜ್ಯಗಳಲ್ಲಿ ಚುನಾವಣೆ ನಡೆದಿದ್ದರೂ, ದೇಶದ ಜನರ ಚಿತ್ತವನ್ನು ಸೆಳೆದದ್ದು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ. ಇಂದು ಐದು ರಾಜ್ಯಗಳ ಫಲಿತಾಂಶಕ್ಕಾಗಿ ಮತ ಎಣಿಕೆ ನಡೆಯುತ್ತಿದೆ. ಬಂಗಾಳದಲ್ಲಿ ಮ್ಯಾಜಿಕ್ ನಂಬರ್‌ಗೆ ಅಗತ್ಯವಿರುವಷ್ಟು ಸ್ಥಾನಗಳಲ್ಲಿ ಟಿಎಂಸಿ ಮುನ್ನಡೆ ಸಾಧಿಸಿದೆ. ಆದರೆ, ಸಿಎಂ ಮಮತಾ ಬ್ಯಾನರ್ಜಿ ಅವರು ನಂದಿಗ್ರಾಮದಲ್ಲಿ ಹಿನ್ನೆಡೆ ಅನುಭವಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಸುವೆಂದು ಅಧಿಕಾರಿ ಮುನ್ನಡೆ ಕಾಯ್ದುಕೊಂಡಿದ್ದಾರೆ. 4550 ಮತಗಳ ಅಂತರದಿಂದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಿನ್ನಡೆ ಅನುಭವಿಸಿದ್ದಾರೆ.
ಪಶ್ಚಿಮ ಬಂಗಾಳದ 116 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಗಳಿಸಿದ್ದು, ಟಿಎಂಸಿ ಅಭ್ಯರ್ಥಿಗಳು 148 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಎರಡು ಹಾಗೂ ಸಿಪಿಎಂ ಒಂದು ಕ್ಷೇತ್ರದಲ್ಲಿ ಮುನ್ನಡೆ ಗಳಿಸಿದೆ. 292 ವಿಧಾನಸಭೆ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಟಿಎಂಸಿ ಮತ್ತು ಬಿಜೆಪಿ ನಡುವೆ ಜಿದ್ದಾಜಿದ್ದಿ ಮುಂದುವರೆದಿದೆ.

