ಆಕ್ಸಿಜನ ಕೊರತೆ 24 ಜನ ಸಾವು ಪ್ರಕರಣ : ರೋಹಿಣಿ ಸಿಂಧೂರಿ ವಿರುದ್ಧ ಸಿಎಂ ಗರಂ!

ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ 24 ಮಂದಿ ಸಾವನ್ನಪ್ಪಿದ ಘಟನೆಗೆ ಸಂಬಂಧಪಟ್ಟಂತೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಿಎಂ ಗರಂ ಆಗಿದ್ದಾರೆ.

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೊರ ಜಿಲ್ಲೆಗಳಿಗೆ ಆಮ್ಲಜನಕ ಪೂರೈಸಲು ನಕಾರ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರಿಂದಾಗಿ ರೋಹಿಣಿ ಸಿಂಧೂರಿ ವಿರುದ್ಧ ಸಿಎಂ ಯಡಿಯೂರಪ್ಪ ಗರಂ ಆಗಿದ್ದಾರೆ.

ದುರಂತ ಸಂಭಿವಿಸಿದ ಬಳಿಕ ಸಿಎಂ ಯಡಿಯೂರಪ್ಪನವರು ಸುಧಾಕರ್ ಅವರನ್ನು ಕರೆದು ಮಾತನಾಡಿದ್ದಾರೆ. ಈ ವೇಳೆಮೈಸೂರು ಜಿಲ್ಲಾಧಿಕಾರಿಯೇ ನೇರ ಕಾರಣ. ಆಕ್ಸಿಜನ್ ಇದೆ ಸರ್, ಸರಬರಾಜು ಆಗಿಲ್ಲ. ಏನ್ ಮಾಡೋದು ಹೇಳಿ. ರೋಹಿಣಿ ಸಿಂಧೂರಿ ವಿರುದ್ಧ ಆರೋಗ್ಯ ಸಚಿವ ಸುಧಾಕರ್ ಸಿಎಂ ಯಡಿಯೂರಪ್ಪ ಮುಂದೆ ಚಾರ್ಜ್ ಶೀಟ್ ಮಾಡಿದ್ದಾರೆ ಎಂದು ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಅಷ್ಟೇ ಅಲ್ಲದೇ ಈ ವಿಚಾರದಲ್ಲಿ ಸಿಎಂ ಸಹ ರೋಹಿಣಿ ವಿರುದ್ಧ ಈ ವಿಚಾರದ ಬಗ್ಗೆ ಗರಂ ಆಗಿದ್ದರು, ಇಂದೇ ಸಿಂಧೂರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

ಆದರೆ ಈ ಬಗ್ಗೆ ಚಾಮರಾಜನಗರ ಜಿಲ್ಲಾಡಳಿತ ಈವರೆಗೆ ಯಾವುದೇ ಅಧಿಕೃತ ಮಾಹಿತಿಯನ್ನು ನೀಡಿಲ್ಲ ಎನ್ನಲಾಗಿದೆ.

ಜಿಲ್ಲಾಡಳಿತ ಮತ್ತು ಸರ್ಕಾರದ ವೈಫಲ್ಯದಿಂದ ಸಾಮಾನ್ಯ ನಾಗರಿಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಸಾರ್ವಜನಿಕರು, ವಿವಿಧ ಸಂಘಟನೆಗಳ ಕಾರ್ಯಕರ್ತರು ಆಸ್ಪತ್ರೆ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights