ಆಟಗಾರರಿಗೆ ಕೊರೊನಾ ಆತಂಕ : 14ನೇ ಆವೃತ್ತಿಯ ಐಪಿಎಲ್ ಆಟಗಳು ಮುಂದೂಡಿಕೆ!

ಸಿಬ್ಬಂದಿ ಹಾಗೂ ಆಟಗಾರರಿಗೆ ಕೊರೊನಾ ಸೋಂಕು ತಗುಲಿದ ನಂತರ 14 ಆವೃತ್ತಿಯ ಐಪಿಎಲ್ ಮುಂದೂಡಲಾಗಿದೆ.

ದೇಶದಲ್ಲಿ ದಿನ ಕಳೆದಂತೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2021) ಅನ್ನು ಮುಂದೂಡಲಾಗಿದೆ.  7 ಮಂದಿಗೆ ಕೊರೊನಾ ಸೋಂಕು ತಗುಲಿದ್ದರಿಂದ ಬಿಸಿಸಿಐ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಇಬ್ಬರು ಆಟಗಾರರಿಗೆ ಕೊರೊನಾ ಪಾಸಿಟಿವ್ ಆದ ಹಿನ್ನೆಲೆಯಲ್ಲಿ ನಿನ್ನೆ ನಡೆಯಬೇಕಾಗಿದ್ದ ಆರ್ಸಿಬಿ ನಡುವಿನ ಪಂದ್ಯವನ್ನು ರದ್ದು ಮಾಡಲಾಗಿತ್ತು. ಕೋಲ್ಕತ್ತಾದ ಇಬ್ಬರು ಆಟಗಾರರಲ್ಲಿ ಕೊರೊನಾ ಸೋಂಕು ಕಂಡು ಬಂದಿತ್ತು.

ಈ ಸೀಸನ್ ನ ಐಪಿಎಲ್ ಸರಣಿಯನ್ನು ಅಮಾನತುಗೊಳಿಸಲಾಗಿದೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಎಎನ್‌ಐಗೆ ತಿಳಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights