ಇಂದಿನಿಂದ ಹಾಸನದಲ್ಲಿ ಟಫ್ ರೂಲ್ಸ್ ಜಾರಿ : ವಾರದಲ್ಲಿ ನಾಲ್ಕು ದಿನ ಲಾಕ್ ಡೌನ್!

ಹಾಸನದಲ್ಲಿ ಕೊರೊನಾ ಅಬ್ಬರ ಹೆಚ್ಚಾಗುತ್ತಿದ್ದು ದಿನದಿಂದ ದಿನಕ್ಕೆ ಪರಿಸ್ಥಿತಿ ಕೈ ಮೀರಿ ಹೋಗುತ್ತಿದೆ. ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ತರಲು ಹೊಸ ರೂಲ್ಸ್ ಜಾರಿಗೊಳಿಸಲಾಗಿದ್ದು, ವಾರದಲ್ಲಿ ನಾಲ್ಕು ದಿನ ಮಾತ್ರ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಉಸ್ತುವಾರಿ ಸಚಿವ ಗೋಪಾಲಯ್ಯ, “ ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಕೊರೊನಾ ನಿಯಂತ್ರಣದ ಬಗ್ಗೆ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಶಾಸಕರು, ಸಂಸದರು, ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿದ್ದೇವೆ. ಈ ಸಭೆಯಲ್ಲಿ ಎಲ್ಲಾ ಜನಪ್ರತಿನಿಧಿಗಳು ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹಿಸಿದ್ದಾರೆ. ಹೀಗಾಗಿ ನಾಲ್ಕು ದಿನ ಸಂಪೂರಣ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ “ ಎಂದಿದ್ದಾರೆ.

ವಾರದಲ್ಲಿ ಸೋಮವಾರ, ಮಂಗಳವಾರ ಮತ್ತು ಶುಕ್ರವಾರ ಬೆಳಿಗ್ಗೆ 6ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿರುತ್ತದೆ. ಜೊತೆಗೆ ಬಾರ್ ಗಳಿಗೂ ಇದೇ ಸಮಯದಲ್ಲಿ ಪಾರ್ಸಲ್ ತೆಗೆದುಕೊಂಡು ಹೋಗಲು ಅವಕಾಶ ನೀಡಲಾಗಿದೆ. ುಳಿದ ದಿನಗಳಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ.

ಉಳಿದ ದಿನಗಳಲ್ಲಿ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ಕಲ್ಪಿಸಲು ಸೂಚಿಸಲಾಗಿದೆ. ಆಸ್ಪತ್ರೆ, ಮೆಡಿಕಲ್, ನರ್ಸಿಂಗ್ ಹೋಂ, ಹಾಲಿನ ಡೈರಿ ಬಿಟ್ಟು ಎಲ್ಲವನ್ನೂ ಬಂದ್ ಮಾಡಲಾಗುವುದು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights