ಕೊರೊನಾಕ್ಕೆ ರಾಜ್ಯದಲ್ಲಿ ಒಂದೇ ದಿನ 328 ಮಂದಿ ಬಲಿ : ಸಾವಿನ ಸಂಖ್ಯೆ 17212ಕ್ಕೇರಿಕೆ!

ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 328 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 17212ಕ್ಕೆ ಏರಿಕೆಯಾಗಿದೆ.

ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವರದಿ ಪ್ರಕಾರ, ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ  49,058 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 17,90,104ಕ್ಕೆ ಏರಿಕೆಯಾಗಿದೆ.

ನರಗದಲ್ಲಿ ಇಂದು 23,706 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 8.87,086ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 139 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿಂದು 18943 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 12,55,797ಕ್ಕೆ ಏರಿಕೆಯಾಗಿದೆ. ಇನ್ನು 5,17,075 ಸಕ್ರೀಯ ಪ್ರಕರಣಗಳು ದಾಖಲಾಗಿವೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights