ಕರ್ನಾಟಕಕ್ಕೆ ಆಕ್ಸಿಜನ್ ನೀಡಲು ಗ್ರೀನ್ ಸಿಗ್ನಲ್ ನೀಡಿದ ಸುಪ್ರೀಂ : ಕೇಂದ್ರಕ್ಕೆ ಮುಖಭಂಗ!

ಕರ್ನಾಟಕಕ್ಕೆ ಆಕ್ಸಿಜನ್ ನೀಡುವ ವಿಚಾರವನ್ನು ಇಂದು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ. ಇದರಿಂದಾಗಿ ಕೇಂದ್ರ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದೆ.

ಕೊರೊನಾ ಸೋಂಕು ವೇಗವಾಗಿ ಹರಡಿ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಕರ್ನಾಟಕದಲ್ಲಿ ಆಕ್ಸಿಜನ್ ಬೇಡಿಕೆ, ಐಸಿಯು ಬೆಡ್ ಬೇಡಿಕೆ ಹೆಚ್ಚಾಗುತ್ತಿದೆ. ಚಾಮರಾಜನಗರದಲ್ಲಿನ ಆಕ್ಸಿಜನ್ ಕೊರತೆಯಿಂದ ನಡೆದ ದುರಂತದ ಬೆನ್ನಲ್ಲೇ ಕರ್ನಾಟಕ ಹೈಕೋರ್ಟ್ ಮಧ್ಯಪ್ರವೇಶಿಸಿತ್ತು. ಹೆಚ್ಚುವರಿ ಆಕ್ಸಿಜನ್ ಪೂರೈಕೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಆದೇಶಿಸಿತ್ತು. ಆದರೆ ಈ ಆದೇಶದ ವಿರುದ್ಧ ಇದೀಗ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಇಂದು ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಸಿ ಕರ್ನಾಟಕಕ್ಕೆ ಆಕ್ಸಿಜನ್ ನೀಡಲು ಅಸ್ತು ಎಂದಿದೆ.

ಆಕ್ಸಿಜನ್ ಕೊರತೆಯಿಂದ ಚಾಮರಾಜನಗರ ಆಸ್ಪತ್ರೆ ಮೃತ್ಯ ಕೂಪವಾಗಿ ಮಾರ್ಪಟ್ಟಿತ್ತು. ಇನ್ನ ಕರ್ನಾಟಕ ಹಲವು ಭಾಗಗಳಲ್ಲಿ ಆಕ್ಸಿಜನ್ ಕೊರತೆ ಗಂಭೀರ ಸಮಸ್ಯೆಯಾಗಿದೆ. ಹೀಗಾಗಿ ಹೈಕೋರ್ಟ್ ಮಧ್ಯಪ್ರವೇಶ ಮಾಡಿತ್ತು. ಈ ಮೂಲಕ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡುತ್ತಿದ್ದ 965 ಮೆಟ್ರಿಕ್ ಟನ್ ಆಕ್ಸಿಜನ್ ಪ್ರಮಾಣವನ್ನು 1,200 ಮೆಟ್ರಿಕ್ ಟನ್ ಗೆ ಹೆಚ್ಚಿಸಬೇಕು ಎಂದು ಹೈಕೋರ್ಟ್ ಕೇಂದ್ರಕ್ಕೆ ಆದೇಶ ನೀಡಿತ್ತು.

ಈ ಆದೇಶದ ವಿರುದ್ಧ ಕೇಂದ್ರ ಸರ್ಕಾರ ಸುಪ್ರೀ ಕೋರ್ಟ್ ನ ಡಿವೈ ಚಂದ್ರಚೂಡ್ ನೇತೃತ್ವದ ನ್ಯಾಯಪೀಠದಲ್ಲಿ ಮನವಿ ಮಾಡಿ, ಹೈಕೋರ್ಟ್ ಆದೇಶವನ್ನು ತಕ್ಷಣವೇ ತಡೆ ಹಿಡಿಯಬೇಕು ಎಂದು ಮನವಿ ಮಾಡಲಾಗಿತ್ತು. ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸರ್ವೋಚ್ಚ ನ್ಯಾಯಾಲಯದಲ್ಲಿ ಮನವಿ ಮಾಡಿದ್ದರು.

ಇಂದು ಅರ್ಜಿ ವಿಚಾರಣೆ ನಡೆದಿದ್ದು ಸುಪ್ರೀ ಕೋರ್ಟ್ ಕರ್ನಾಟಕಕ್ಕೆ ಆಕ್ಸಿಜನ್ ನೀಡಬೇಕು ಎಂದು ನಿರ್ಧರ ತೆಗೆದುಕೊಂಡಿದೆ.

Spread the love

Leave a Reply

Your email address will not be published. Required fields are marked *