ಕೊರೊನಾ ಗೆದ್ದ ಎಚ್‌ ಎಸ್ ದೊರೆಸ್ವಾಮಿ : ಆಸ್ಪತ್ರೆಯಿಂದ ಡಿಸ್ಚಾರ್ಜ್..!

ಕೊರೊನಾ ಸೋಂಕು ತಗುಲಿದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ 104 ವರ್ಷದ ಎಚ್.ಎಸ್ ದೊರೆಸ್ವಾಮಿಯವರು ಸಂಪೂರ್ಣ ಗುಣಮುಖರಾಗಿದ್ದು ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕೊರೊನಾ ಕಾರಣದಿಂದ ಮೇ 06 ರಂದು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ನಿರ್ದೇಶಕ ಮಂಜುನಾಥ್ ಅವರ ಮಾರ್ಗದರ್ಶನದಲ್ಲಿ ವೈದ್ಯರು ಮತ್ತು ಸಿಬ್ಬಂದಿ ಬಹಳ ಕಾಳಜಿ ವಹಿಸಿ ಗುಣಪಡಿಸಿದ್ದಾರೆ.

ದೊರೆಸ್ವಾಮಿಯವರ ರಕ್ತದಲ್ಲಿನ ಆಮ್ಲಜನಕದ ಮಟ್ಟ, ಬಿಪಿ, ಶುಗರ್ ಪರೀಕ್ಷೆಯನ್ನು ಪ್ರತಿದಿನವೂ ಮಾಡಲಾಗುತ್ತಿತ್ತು. ಅವರ ರಕ್ತದಲ್ಲಿನ ಆಮ್ಲಜನಕದ ಮಟ್ಟ ಎಂದೂ 96ಕ್ಕಿಂತ ಕೆಳಗಿಳಿದಿರಲಿಲ್ಲ. ಎಂದಿನಂತೆ ದಿನಪತ್ರಿಕೆ, ಪುಸ್ತಕಗಳನ್ನು ಓದುತ್ತಾ ಧೈರ್ಯದಿಂದ ಇದ್ದರು ಎಂದು ತಿಳಿಸಿದ್ದಾರೆ.

ಇಂದು ಅವರು ಸಂಪೂರ್ಣ ಗುಣಮುಖರಾಗಿದ್ದರು. ಕೊರೊನಾ ಪರೀಕ್ಷೆಯಲ್ಲಿಯೂ ನೆಗೆಟಿವ್ ಬಂದ ಕಾರಣಕ್ಕೆ ಅವರನ್ನು ಡಿಸ್ಚಾರ್ಜ್ ಮಾಡಿಸಿಕೊಂಡು ಜಯನಗರದ ಅವರ ಮನೆಗೆ ಕರೆದೊಯ್ಯಲಾಗಿದೆ. 104 ವರ್ಷದ ದೊರೆಸ್ವಾಮಿಯವರು ಕೊರೊನಾದಿಂದ ಚೇತರಿಸಿಕೊಂಡಿದ್ದು ಇತರರಿಗೂ ಮಾದರಿಯಾಗಲಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights