ಕೋವಿಡ್ ತಡೆಗೆ ಜೂನ್ 1 ರವರೆಗೆ ನಿರ್ಬಂಧಗಳನ್ನು ವಿಸ್ತರಿಸಿದ ಮಹಾರಾಷ್ಟ್ರ!

ಕೊರೊನವೈರಸ್ ಹರಡುವಿಕೆಯನ್ನು ತಡೆಯಲು ಮಹಾರಾಷ್ಟ್ರ ಲಾಕ್‌ಡೌನ್ ತರಹದ ನಿರ್ಬಂಧಗಳನ್ನು ಜೂನ್ 1 ರವರೆಗೆ ವಿಸ್ತರಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಹೊಸ ನಿರ್ಬಂಧಗಳಲ್ಲಿ ರಾಜ್ಯಕ್ಕೆ ಪ್ರವೇಶಿಸುವವರಿಗೆ ಕಡ್ಡಾಯ ಋಣಾತ್ಮಕ ಆರ್‌ಟಿ-ಪಿಸಿಆರ್ ಪರೀಕ್ಷಾ ವರದಿ ಕಡ್ಡಾಯವಾಗಿರುತ್ತದೆ. ಜೊತೆಗೆ ಸೂಕ್ಷ್ಮ ಮೂಲದ ಸ್ಥಳಗಳಿಂದ ಬರುವವರಿಗೆ ತಡೆಯೊಡ್ಡಲಾಗುತ್ತದೆ ಎಂದು ಮುಖ್ಯ ಕಾರ್ಯದರ್ಶಿ ಸೀತಾರಾಮ್ ಕುಂಟೆ ಬುಧವಾರ ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.

“ದಿನನಿತ್ಯ ಅಗತ್ಯ ವಸ್ತುಗಳನ್ನು ನಿರ್ಬಂಧಗಳಿಲ್ಲದೆ ಅನುಮತಿಸಬಹುದು, ಆದರೆ ಮನೆ ವಿತರಣೆಯ ಮೂಲಕ ವ್ಯವಹರಿಸುವ ಅಂಗಡಿಗಳಿಗೆ ಅನುಮತಿ ಬೇಕಾಗುತ್ತದೆ” ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

ಸರಕು ಸಾಗಣಿಕೆ ಸಂದರ್ಭದಲ್ಲಿ ಎರಡು ಕ್ಕಿಂತ ಹೆಚ್ಚು ಜನರಿಗೆ ಆ ವಾಹನಗಳಲ್ಲಿ ಪ್ರಯಾಣಿಸಲು ಅವಕಾಶವಿರುವುದಿಲ್ಲ. ಆದರೆ ಅತೀ ಹೆಚ್ಚು ಪ್ರಕರಣಗಳು ದಾಖಲಾಗುತ್ತಿರುವುದರಿಂದ ಲಾಕ್ ಡೌನ್ ತರಹದ ನಿರ್ಬಂಧಗಳನ್ನು ಜೂನ್ 1 ರ ವರೆಗೆ ವಿಸ್ತರಿಸಲಾಗಿದೆ.

ಈ ಹಿಂದೆ ಏಪ್ರಿಲ್ 5 ರಂದು ರಾಜ್ಯದಲ್ಲಿ ಲಾಕ್‌ಡೌನ್ ತರಹದ ನಿರ್ಬಂಧಗಳನ್ನು ವಿಧಿಸಲಾಗಿತ್ತು.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights