ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಎಸ್ಎಸ್ಎಲ್ಸಿ ಪರೀಕ್ಷೆ ಮುಂದೂಡಿಕೆ!

ರಾಜ್ಯದಲ್ಲಿ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇರುವುದರಿಂದ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ರಾಜ್ಯ ಸರ್ಕಾರ ಮುಂದೂಡಿದೆ.

ಜೂನ್ 21 ರಿಂದ ರಾಜ್ಯಾದ್ಯಂತ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಬಾರದ ಹಿನ್ನಲೆ ಪರೀಕ್ಷೆಗಳನ್ನು ಮುಂದೂಡಲು ಸರ್ಕಾರ ನಿರ್ಧರಿಸಿದೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿ ಸ್ಪಷ್ಟನೆ ನೀಡಿದ ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಸಚಿವ ೆಸ್, ಸುರೇಶ್ ಕುಮಾರ್ ಅವರು, ಜೂನ್ 21 ರಿಂದ ಪ್ರಾರಂಭವಾಗಬೇಕಿದ್ದ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೂ ಮುಂದೂಡಲಾಗಿದೆ ಎಂದಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಶಿಕ್ಷಕರು, ಮಕ್ಕಳು, ಶಾಲಾ ಸಂಘಟನೆಗಳ ಾತಂಕವನ್ನು ಗಮನವದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೊರೊನಾ 2ನೇ ಅಲೆ ಸಂಪೂರ್ಣ ಹತೋಟಿಗೆ ಬಂದ ಬಳಿಕ ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ. ವಿದ್ಯಾರ್ಥಿಗಳು ಈ ಬಗ್ಗೆ ಚಿಂತಿಸದೇ ೇಕಾಗ್ರತೆಯಿಂದ ಪರೀಕ್ಷಾ ತಯಾರಿಯಲ್ಲಿ ತೊಡಗಿಕೊಳ್ಳಬೇಕು, ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬಾರದು ಎಂದು ತಿಳಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights