ಕೋವಿಡ್‌ ಲಸಿಕೆ ಖರೀದಿಗೆ ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್‌ನಿಂದ 100 ಕೋಟಿ ರೂ ಸಹಾಯ: ಸಿದ್ದರಾಮಯ್ಯ

ಕೊರೊನಾ ಸೋಂಕಿನ ವಿರುದ್ದ ಹೋರಾಡಲು, ಕೋವಿಡ್‌ ಲಸಿಕೆಯನ್ನು ಖರೀದಿಸಲು ರಾಜ್ಯ ಸರ್ಕಾರಕ್ಕೆ 100 ಕೋಟಿ ಸಹಾಯ ಧನವನ್ನು ನೀಡುವುದಾಗಿ ರಾಜ್ಯದ ಕಾಂಗ್ರೆಸ್‌ ಘೋಷಿಸಿದೆ.

ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, ಕಾಂಗ್ರೆಸ್ ನ ಪ್ರತಿ ಶಾಸಕರು ತಮಗೆ ನೀಡಲಾಗುವ ಪ್ರದೇಶಾಭಿವೃದ್ಧಿ ನಿಧಿಯಿಂದ ಒಂದು ಕೋಟಿ ರೂಪಾಯಿಗಳನ್ನು ನೀಡುವ ಮೂಲಕ 100 ಕೋಟಿ ರೂಪಾಯಿ ಸಂಗ್ರಹ ಮಾಡಿ ಸರ್ಕಾರಕ್ಕೆ ನೀಡುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಪ್ರತಿ ಶಾಸಕರು, ಸಂಸದರಿಗೆ ಪ್ರತಿವರ್ಷ ನೀಡಲಾಗುವ ಪ್ರದೇಶಾಭಿವೃದ್ಧಿ ನಿಧಿಯಡಿ ತಲಾ 1 ಕೋಟಿ ರೂಪಾಯಿಯನ್ನು ನೀಡಲಾಗುತ್ತದೆ. ಶಾಸಕರು, ವಿಧಾನಪರಿಷತ್ ಸದಸ್ಯರಿಗೆ ಪ್ರದೇಶಾಭಿವೃದ್ಧಿ ನಿಧಿಯಡಿ ತಲಾ 2 ಕೋಟಿ ರೂಪಾಯಿ, ಲೋಕಸಭಾ ಮತ್ತು ರಾಜ್ಯಸಭಾ ಸಂಸದರಿಗೆ ತಲಾ 5 ಕೋಟಿ ರೂಪಾಯಿ ಸಿಗುತ್ತದೆ, ಅದರಡಿ ರಾಜ್ಯದಲ್ಲಿರುವ 95 ಮಂದಿ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರು ಕೊರೋನಾ ಲಸಿಕೆಗೆ ಹಣ ನೀಡಲಿದ್ದಾರೆ ಎಂದರು. ಅದನ್ನು ಸರ್ಕಾರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

ನೇರವಾಗಿ ಖರೀದಿಸಲು ಅವಕಾಶ ನೀಡಿ: ಕೊರೋನಾ ಲಸಿಕೆ ಖರೀದಿ ಮಾಡಿ ಜನರಿಗೆ ಸರಿಯಾಗಿ ನೀಡುವಲ್ಲಿ ಕೇಂದ್ರದ ಮೋದಿ ಹಾಗೂ ರಾಜ್ಯದ ಬಿ ಎಸ್ ವೈ ಸರ್ಕಾರ ವಿಫಲವಾಗಿದೆ. ಹೀಗಾಗಿ ಕಂಪೆನಿಯಿಂದ ನೇರವಾಗಿ ಖರೀದಿ ಮಾಡಲು ಅವಕಾಶ ನೀಡಿ ಎಂದು ನಾವು ಸರ್ಕಾರವನ್ನು ಕೇಳುತ್ತೇವೆ. ಲಸಿಕೆ ಉತ್ಪಾದಕ ಕಂಪೆನಿಗಳಿಂದ ನೇರವಾಗಿ ಲಸಿಕೆ ಸಂಗ್ರಹಿಸಿ ಜನರಿಗೆ ವಿತರಿಸಲು ನೆರವಾಗಲು ಕಾಂಗ್ರೆಸ್ ಪಕ್ಷ ಮುಂದಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಕೊರೊನಾ ಲಸಿಕೆ ನೀಡಿಕೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಬೇಜವಬ್ದಾರಿಯಿಂದ ವರ್ತಿಸುತ್ತಿದೆ. ಕೋವಿಶೀಲ್ಡ್ ಲಸಿಕೆ ಡೋಸ್ ನೀಡಿಕೆಯಲ್ಲಿ 14ರಿಂದ 16 ವಾರಗಳ ಅಂತರವೇಕೆ, ಲಸಿಕೆ ನೀಡುವ ವಿಚಾರದಲ್ಲಿ ಕೂಡ ಸರ್ಕಾರ ದಿನಕ್ಕೊಂದು ಹೇಳಿಕೆ ನೀಡುತ್ತಿದೆ, ತಜ್ಞರು ಹೇಳುತ್ತಿದ್ದಾರೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ನನಗನಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಐದು ರಾಜ್ಯಗಳಲ್ಲಿ ಕಳಪೆ ಸಾಧನೆ: ಕಾಂಗ್ರೆಸ್‌ಗೆ ಅತ್ಮಾವಲೋಕನ ಮತ್ತು ವಿಮರ್ಶೆಯ ಅಗತ್ಯವಿದೆ: ಅಶೋಕ್‌ ಚವಾಣ್‌

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights