‘ನ್ಯಾಯಾಧೀಶರು ಸರ್ವಜ್ಞರಲ್ಲ’ ಸಿ.ಟಿ. ರವಿ ಹೇಳಿಕೆ ವಿರುದ್ಧ ವಕೀಲರ ಸಂಘ ಆಕ್ಷೇಪ!

‘ನ್ಯಾಯಾಧೀಶರು ಸರ್ವಜ್ಞರಲ್ಲ’ ಎಂದ ಬಿಜೆಪಿ ಮುಖಂಡ ಸಿ.ಟಿ. ರವಿ ಹಾಗೂ ಲಸಿಕೆ ಉತ್ಪಾದನೆ ಆಗದಿದ್ದರೆ ನಾವು ನೇಣು ಹಾಕಿಕೊಳ್ಳಬೇಕಾ ಎಂದಿರುವ ಕೇಂದ್ರ ಮಂತ್ರಿ ಡಿ.ವಿ. ಸದಾನಂದಗೌಡ ಹೇಳಿಕೆಗಳಿಗೆ ಬೆಂಗಳೂರು ವಕೀಲರ ಸಂಘ ಹಾಗೂ ಜನಾಕ್ರೋಶಗೊಂಡಿದ್ದಾರೆ.

ಕಳೆದೊಂದು ವರ್ಷದ ಅವಧಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೋಂಕು ತಡೆಗೆ ಯಾವೆಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಿತ್ತೋ ಅವುಗಳನ್ನು ಕೈಗೊಳ್ಳುವ ಬದಲು ಸಮಯ ವ್ಯರ್ಥಗೊಳಿಸಿವೆ. ಸಾರ್ವಜನಿಕ ವಲಯದ ಆರೋಗ್ಯ ಮತ್ತು ಸಾಂಕ್ರಾಮಿಕ ರೋಗದ ಸೋಂಕನ್ನು ತಡೆಯುವ ನಿಟ್ಟಿನಲ್ಲಿ ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳ ಮೇಲೆ ಹೊಣೆಗಾರಿಕೆಯಿದೆ. ಆದರೆ ಸರ್ಕಾರಗಳು ಅವುಗಳನ್ನು ಸರಿಯಾಗಿ ನಿಭಾಯಿಸಿಲ್ಲ. ಇದರೊಂದಿಗೆ ಚಾಮರಾಜನಗರ ದುರಂತ ಪ್ರಕರಣ ಸೇರಿದಂತೆ ಹಲವು ವಿಚಾರಗಳಲ್ಲಿ ಹೈಕೋರ್ಟ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಹೈಕೋರ್ಟ್ ನ್ಯಾಯಾಧೀಶರ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದಶಿ ಸಿಟಿ ರವಿ ನ್ಯಾಯಾಧೀಶರು ಸರ್ವಜ್ಞರಲ್ಲ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಈ ಹೇಳಿಕೆಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತಾದರೂ ಇದನ್ನೂ ಲೆಕ್ಕಕ್ಕೆ ತೆಗೆದುಕೊಳ್ಳದ ಮಾಜಿ ಸಚಿವ ಸಿಟಿ ರವಿ ಮತ್ತೆ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಸಿಟಿ ರವಿ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಮೊದಲು ಮನುಷ್ಯರಾಗಿ ಎಂದು ಕಿಡಿಕಾರಿದ್ದಾರೆ. “ಸಿಟಿ ರವಿ ಅವರೇ ಜನರ ಸಂಕಟಕ್ಕೆ ದನಿಯಾಗಲು ಸರ್ವಜ್ಞನಾಗಬೇಕಿಲ್ಲ, ಮಾನವೀಯತೆಯುಳ್ಳ ಮನುಷ್ಯನಾಗಿದ್ದರೆ ಸಾಕು. ಅಧಿಕಾರದ ದುರಹಂಕಾರ ಬಿಟ್ಟು ಮೊದಲು ಮನುಷ್ಯರಾಗಿ. ನ್ಯಾಯಾಧೀಶರ ನಿಂದನೆ ನ್ಯಾಯಾಲಯದ ನಿಂದನೆ ಕೂಡಾ ಆಗುತ್ತದೆ ಎಂದು ಗೊತ್ತಿಲ್ಲದ ನಿಮ್ಮಂತಹವರನ್ನು ಸರ್ವಜ್ಞ ಎನ್ನುವುದಿಲ್ಲ, ಮೂರ್ಖ ಎನ್ನುತ್ತಾರೆ” ಎಂದು ಟ್ವೀಟ್ ಮಾಡಿದ್ದಾರೆ.

ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ನಾಯಕ ಸಿಟಿ ರವಿ ವಿರುದ್ಧ ವಕೀಲರ ಸಂಘ, ಹೈಕೋರ್ಟ್ ವಕೀಲರು ಆಕ್ರೋಶ ಹೊರಹಾಕಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights