ಆಮ್ಲಜನಕದ ಕೊರತೆ : ಗೋವಾದ ಅತಿದೊಡ್ಡ ಕೋವಿಡ್ ಆಸ್ಪತ್ರೆಯಲ್ಲಿ 74 ಸಾವು!

ಆಮ್ಲಜನಕದ ಕೊರತೆಯಿಂದಾಗಿ ಗೋವಾದ ಅತಿದೊಡ್ಡ ಕೋವಿಡ್ ಆಸ್ಪತ್ರೆಯಲ್ಲಿ 74 ಜನ ಸಾವನ್ನಪ್ಪಿದ್ದಾರೆ.

ಕಳೆದ ನಾಲ್ಕು ದಿನಗಳಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಎಪ್ಪತ್ತನಾಲ್ಕು ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಇಂದು ಮುಂಜಾನೆ 2 ಗಂಟೆಯಿಂದ 6 ರವರೆಗೆ 13 ಜನರು ಸಾವನ್ನಪ್ಪಿದ್ದು, ಬುಧವಾರ 20 ಜನರು, ಗುರುವಾರ ಮುಂಜಾನೆ 15 ಜನ ಮತ್ತು ಮಂಗಳವಾರ 26 ಜನರು ಪ್ರಾಣ ಕಳೆದುಕೊಂಡಿದ್ದಾರೆ.

ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ಭೇಟಿ ನೀಡಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, “ವೈದ್ಯಕೀಯ ಆಮ್ಲಜನಕದ ಲಭ್ಯತೆ ಮತ್ತು ಅದರ ಪೂರೈಕೆಯ ನಡುವಿನ ಅಂತರವು ಕೆಲವು ಸಮಸ್ಯೆಗಳಿಗೆ ಕಾರಣವಾಗಬಹುದು” ಎಂದು ಹೇಳಿದರು. ರಾಜ್ಯದಲ್ಲಿ ಆಮ್ಲಜನಕದ ಪೂರೈಕೆಯ ಕೊರತೆಯಿಲ್ಲ ಎಂದು ಒತ್ತಿ ಹೇಳಿದರು.

ಆದರೆ ಸಾವಂತ್ ಅವರ ಹೇಳಿಕೆ ಗೋವಾದ ಪ್ರಧಾನ ಕಾರ್ಯದರ್ಶಿ ಪಿಕೆ ಗೋಯೆಲ್ ಅವರು ಕೇಂದ್ರ ಸರ್ಕಾರಕ್ಕೆ ಮಂಗಳವಾರ ಬರೆದ ಪತ್ರಕ್ಕೆ ವಿರುದ್ಧವಾಗಿದೆ. ಆಕ್ಸಿಜನ್ ಕೊರತೆಯ ಬಗ್ಗೆ ಅವರು ಒತ್ತಿ ಹೇಳಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights