ಆಂಧ್ರ ಸಿಎಂ ಜಗನ್‌ ವಿರುದ್ದ ಬಂಡಾಯ: ದೇಶದ್ರೋಹ ಪ್ರಕರಣದಲ್ಲಿ YSR ಕಾಂಗ್ರೆಸ್‌ ಸಂಸದನ ಬಂಧನ!

ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‌ಮೋಹನ್‌ ರೆಡ್ಡಿ ಅವರ ಜಾಮೀನು ರದ್ದುಪಡಿಸುವಂತೆ ಒತ್ತಾಯಿಸಿದ್ದ ವೈಎಸ್‌ಆರ್‌ ಕಾಂಗ್ರೆಸ್‌ನ ಸಂಸದ ಕನಮುರಿ ರಘರಾಮ ಕೃಷ್ಣಂ ರಾಜು ಅವರನ್ನು ದೇಶದ್ರೋಹ ಪ್ರಕರಣದಲ್ಲಿ ಬಂಧಿಸಲಾಗಿದೆ.

ಜಗನ್‌ಗೆ ನೀಡಿಲಾಗಿರುವ ಜಾಮೀನನ್ನು ರದ್ದುಪಡಿಸಬೇಕು ಎಂದು ಕನಮುರಿ ರಘರಾಮ ಕೃಷ್ಣಂ ರಾಜು ಅವರು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ಇದಾದ ನಂತರ, ಕೃಷ್ಣಂ ರಾಜು ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿರುವ ಸಿಐಡಿ ಪೊಲೀಸರು ಶುಕ್ರವಾರ ರಾತ್ರಿ ಅವರನ್ನು ಬಂಧಿಸಿದ್ದಾರೆ.

ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ನಾಯಕ ಹಾಗೂ ಮುಖ್ಯಮಂತ್ರಿ ಜಗನ್‌ಮೋಹನ್‌ರೆಡ್ಡಿ ವಿರುದ್ಧ ರಘರಾಮ ಕೃಷ್ಣಂ ರಾಜು ಬಂಡಾಯ ಎದ್ದಿದ್ದಾರೆ. ಹೀಗಾಗಿ ಅವರು, ಜಗನ್‌ಮೋಹನ್‌ರೆಡ್ಡಿ ಅವರಿಗೆ ಆಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಾಮೀನು ನೀಡಲಾಗಿದ್ದು, ಆ ಜಾಮೀನನ್ನು ರದ್ದುಪಡಿಸಬೇಕು ಎಂದು ಸಿಬಿಐ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ಮುಖ್ಯಮಂತ್ರಿಗಳು ಜಾಮೀನಿನ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿದ್ದು ಅವರ ಜಾಮೀನನ್ನು ಕೂಡಲೇ ರದ್ದುಪಡಿಸಬೇಕು ಎಂದು ಸಿಬಿಐ ನ್ಯಾಯಾಲಯವನ್ನು ಕೋರಿದ್ದರು.

ಈ ಬೆಳವಣಿಗೆಯ ಬೆನ್ನಲೇ ಆಂಧ್ರದ ಸಿಐಡಿ ಪೊಲೀಸರು ರಘರಾಮ ಕೃಷ್ಣಂ ರಾಜು ವಿರುದ್ಧ ದೇಶದ್ರೋಹ ಪ್ರಕರಣದ ಅಡಿಯಲ್ಲಿ ಬಂಧಿಸಿದ್ದಾರೆ.

ರಘರಾಮ ಕೃಷ್ಣಂ ರಾಜು ಅವರು ಕೆಲವು ಸಮುದಾಯಗಳ ವಿರುದ್ಧ ದ್ವೇಷದ ಭಾಷಣ ಮಾಡಿದ್ದಾರೆ ಹಾಗೂ ಆಡಳಿತ ಸರ್ಕಾರದ ವಿರುದ್ಧ ಜನರಲ್ಲಿ ಅಸಮಾಧಾನ ಸೃಷ್ಟಿಸುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಸಂಸದ ತೇಜಸ್ವಿ ಸೂರ್ಯ ವಿರುದ್ದ ಪಿಐಎಲ್‌; ವಿಚಾರಣೆ ನಡೆಸಲು ಹೈಕೋರ್ಟ್‌ ನಕಾರ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights