ರಾಜ್ಯದಲ್ಲಿ ಕೊರೊನಾ ಅಟ್ಟಹಾಸ : ಇನ್ನೂ 15 ದಿನ ಲಾಕ್ ಡೌನ್ ಮುಂದುವರೆಯುವ ಸಾಧ್ಯತೆ..!
ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಮದುವರೆದಿದ್ದು ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡುಬರುತ್ತಿಲ್ಲ. ಹೀಗಾಗಿ ಈಗಾಗಲೇ ಜಾರಿಯಲ್ಲಿರುವ ಲಾಕ್ ಡೌನನ್ನು 15 ದಿನಗಳ ಕಾಲ ವಿಸ್ತರಿಸುವ ಸಾಧ್ಯತೆ ಇದೆ.
ದೇಶದಲ್ಲಿ ನಿತ್ಯ ಮೂರು ಲಕ್ಷ ಜನರಿಗೆ ಸೋಂಕು ತಗುಲಿದರೆ ನಲವತ್ತು ಸಾವಿರಕ್ಕೂ ಅಧಿಕ ಜನ ಮಹಾಮಾರಿಗೆ ಬಲಿಯಾಗುತ್ತಿದ್ದಾರೆ. ದೇಶದಲ್ಲೇ ಅತೀ ಹೆಚ್ಚು ಏಕದಿನ ಪ್ರಕರಣಗಳ ಸಂಖ್ಯೆಯಲ್ಲಿ ಕರ್ನಾಟಕ ರಾಜ್ಯ ಕಳೆದ ಮೂರು ದಿನಗಳಿಂದ ಮುಂಚೂಣಿಯಲ್ಲಿದ್ದು ಕಳೆದ 24 ಗಂಟೆಯಲ್ಲಿ ಮೂರನೇ ಸ್ಥಾನಕ್ಕೆ ಬಂದಿದೆ. ಅದ್ರಲ್ಲೂ ರಾಜ್ಯ ರಾಜಧಾನಿಯಲ್ಲಂತೂ ಕೊರೊನಾ ಅರ್ಭಟಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ನಿತ್ಯ ಸಾವಿನ ಸುದ್ದಿ ಕೇಳಿ ಜನರ ನಿದ್ದೆ ಹಾಳಾಗಿದೆ. ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬರುವ ಲಕ್ಷಣಗಳೇ ಕಾಣಿಸುತ್ತಿಲ್ಲ. ಹೀಗಾಗಿ ಮುಂದಿನ ವಾರ ಮೇ 24 ಕ್ಕೆ ಮುಗಿಯಬೇಕಿದ್ದ ಲಾಕ್ ಡೌನ್ ವಿಸ್ತಾರಗೊಳ್ಳುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿವೆ.
ಈ ಬಗ್ಗೆ ಇನ್ನೂ ಆರೋಗ್ಯ ಸಚಿವರು ಸ್ಪಷ್ಟಪಡಿಸಿಲ್ಲ. ಆದರೆ ಉನ್ನತ ಮಟ್ಟದ ಸಭೆಯಲ್ಲಿ ಚರ್ಚೆ ಬಳಿಕ ಲಾಕ್ ಡೌನ್ ವಿಸ್ತಾರದ ಬಗ್ಗೆ ಮಾಹಿತಿ ನೀಡುವುದಾಗಿ ಸುದ್ದಿಗಾರರಿಗೆ ಹೇಳಿದ್ದಾರೆ.
ಭಾನುವಾರ 2,81,386 ಪ್ರಕರಣಗಳು ಪತ್ತೆಯಾಗಿವೆ. ಡಿಸ್ಚಾರ್ಜ್ ಆದವರು 3,78,741 ಜನ. ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ 2,49,65,463ಕ್ಕೆ ಏರಿಕೆ ಆಗಿದೆ. ದಿನದಿಂದ ದಿನಕ್ಕೆ ಕೊರೋನಾ ರೋಗಕ್ಕೆ ಬಲಿ ಆಗುತ್ತಿರುವವರ ಸಂಖ್ಯೆ ಕೂಡ ಹೆಚ್ಚಾಗಿದೆ. ಭಾನುವಾರ 4,106 ಜನರು ಬಲಿ ಆಗಿದ್ದು ಈವರೆಗೆ ಕೊರೋನಾದಿಂದ ಸತ್ತವರ ಸಂಖ್ಯೆ 2,74,390ಕ್ಕೆ ಏರಿಕೆ ಆಗಿದೆ.