ಗುಜರಾತ್‌ನ ಸೌರಾಷ್ಟ್ರ ಪ್ರದೇಶದಲ್ಲಿ 4.5 ತೀವ್ರತೆಯಲ್ಲಿ ಭೂಕಂಪ..!

ಟೌಕ್ಟೇ ಚಂಡಮಾರುತ ಆತಂಕದ ನಡುವೆ ಗುಜರಾತ್‌ನ ಸೌರಾಷ್ಟ್ರ ಪ್ರದೇಶದಲ್ಲಿ 4.5 ರ ತೀವ್ರತೆಯ ಭೂಕಂಪ ಸಂಭವಿಸಿದ್ದು ಉನಾದಲ್ಲಿ ನಡುಕ ಉಂಟಾಗಿದೆ.

ಸೋಮವಾರ ಬೆಳಿಗ್ಗೆ ಗುಜರಾತ್‌ನ ಸೌರಾಷ್ಟ್ರ ಪ್ರದೇಶದಲ್ಲಿ ರಿಕ್ಟರ್ ಮಾಪಕದಲ್ಲಿ 4.5 ರ ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ರಾಜ್ಯದ ಉನಾ ಮತ್ತು ರಾಜುಲಾ ಪ್ರದೇಶಗಳಲ್ಲೂ ನಡುಕ ಉಂಟಾಗಿದೆ.

ಸೋಮವಾರ ಮುಂಜಾನೆ 3: 37 ಕ್ಕೆ ಉನಾದ ಪೂರ್ವಕ್ಕೆ 3.5 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ.

ಯಾವುದೇ ಪ್ರಾಣ ಹಾನಿ ಮತ್ತು ಆಸ್ತಿಪಾಸ್ತಿ ವರದಿಯಾಗಿಲ್ಲ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights