ದೇಶದಲ್ಲಿ ಏಕದಿನ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ : ಸಾವಿನ ಸಂಖ್ಯೆ ಏರಿಕೆ!

ದೇಶದಲ್ಲಿ ಏಕದಿನ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕಡಿಮೆಯಾಗುತ್ತಿದ್ದು ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಕಳೆದ 24 ಗಂಟೆಯಲ್ಲಿ 2.81 ಲಕ್ಷ ಹೊಸ ಪ್ರಕರಣಗಳು ದಾಖಲಾಗಿದ್ದು ಒಂದೇ ದಿನದಲ್ಲಿ 4,106 ಸಾವುಗಳು ಸಂಭವಿಸಿವೆ. ಸತತ 5ನೇ ದಿನವೂ ದೇಶದಲ್ಲಿ ಕೊರೊನಾ ಸಾವಿನ ಸಂಖ್ಯೆ ನಾಲ್ಕು ಸಾವಿರ ಗಡಿ ದಾಟಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,81,386 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದ್ದು, 4,106 ಸಾವುಗಳು ದಾಖಲಾಗಿವೆ. ದೇಶದಲ್ಲಿ ಕಳೆದ ಎರಡು ದಿನಗಳಿಂದ ಕರ್ನಾಟಕವೇ ಏಕದಿನ ಪ್ರಕರಣಗಳಲ್ಲಿ ಮೊದಲನೇ ಸ್ಥಾನದಲ್ಲಿತ್ತು. ಆದರೆ ಕಳೆದ 24 ಗಂಟೆಗಳಲ್ಲಿ ದಾಖಲಾದ ೇಕದಿನ ಪ್ರಕರಣಗಳಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ.

ಗರಿಷ್ಠ ಪ್ರಕರಣಗಳನ್ನು ದಾಖಲಿಸಿದ ಅಗ್ರ ಐದು ರಾಜ್ಯಗಳಲ್ಲಿ ಮಹಾರಾಷ್ಟ್ರದಲ್ಲಿ 34,389 ಪ್ರಕರಣಗಳು, ತಮಿಳುನಾಡು 33,181 ಪ್ರಕರಣಗಳು, ಕರ್ನಾಟಕ 31,531 ಪ್ರಕರಣಗಳು, ಕೇರಳದಲ್ಲಿ 29,704 ಪ್ರಕರಣಗಳು ಮತ್ತು ಆಂಧ್ರಪ್ರದೇಶ 24,171 ಪ್ರಕರಣಗಳು ದಾಖಲಾಗಿವೆ.

ಇನ್ನೂ ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 4,106 ಸಾವುಗಳು ವರದಿಯಾಗಿದ್ದು ಮಹಾರಾಷ್ಟ್ರದಲ್ಲಿ 974 ಗರಿಷ್ಠ ಸಾವುನೋವುಗಳು ವರದಿಯಾಗಿದ್ದು, ನಂತರದ ದಿನಗಳಲ್ಲಿ ಕರ್ನಾಟಕದಲ್ಲಿ 403 ಸಾವುನೋವುಗಳು ಸಂಭವಿಸಿವೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights