ಸಿಎಂ ಘೋಷಿಸಿದ ವಿಶೇಷ ಪ್ಯಾಕೇಜ್ ನಲ್ಲಿ ಯಾರ್ಯಾರಿಗೆ ಎಷ್ಟೆಷ್ಟು ಸಹಾಯಧನ?

ಕೊರೊನಾ ಎನೇ ಅಲೆಯಿಂದಾಗಿ ಆರ್ಥಿಕ ಸಂಕಷ್ಟದಲ್ಲಿರುವ ಜನರಿಗೆ 1,250 ಕೋಟಿ ರೂ. ಸಹಾಯಧನವನ್ನು ಸಿಎಂ ಯಡಿಯೂರಪ್ಪ ಬಿಡುಗಡೆ ಮಾಡಿದ್ದಾರೆ.

ಈ ಲಾಕ್ ಡೌನ್ ನಿಂದ ಹಲವು ಅಸಂಘಟಿತ ವಲಯಗಳಿಗೆ, ರೈತರಿಗೆ, ದಿನಗೂಲಿ ನೌಕರರಿಗೆ, ಬಡವರು-ನಿರ್ಗತಿಕರಿಗೆ ತೀವ್ರ ಸಂಕಷ್ಟವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಸುಮಾರು 1,250 ಕೋಟಿ ರೂಪಾಯಿಗೂ ಅಧಿಕ ವಿಶೇಷ ಪರಿಹಾರ ಪ್ಯಾಕೇಜ್ ನ್ನು ವಿವಿಧ ವರ್ಗಗಳ ಹಿತರಕ್ಷಣೆಗೆ ಬಿಡುಗಡೆ ಮಾಡಿದೆ.

ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಇಂದು ಸಚಿವ ಸಂಪುಟದ ಸಹೋದ್ಯೋಗಿಗಳ ಜೊತೆ ಸಭೆ ನಡೆಸಿ ಚರ್ಚೆ ಮಾಡಿ ತೆಗೆದುಕೊಂಡ ತೀರ್ಮಾನಗಳು, ಪರಿಹಾರಗಳನ್ನು ಮಾಧ್ಯಮ ಪ್ರತಿನಿಧಿಗಳ ಮುಂದೆ ಪ್ರಕಟಿಸಿದರು.

ಸಿಎಂ ಘೋಷಿಸಿದ 1,250 ಕೋಟಿ ರೂ. ಪರಿಹಾರ ಪ್ಯಾಕೇಜ್ ನಲ್ಲಿ ಯಾರ್ಯಾರಿಗೆ ಎಷ್ಟೆಷ್ಟು ಹಣ ನೀಡಲಾಗಿದೆ ಅನ್ನೋದನ್ನ ನೋಡುವುದಾದರೆ-

-ಬೀದಿ ಬದಿ ವ್ಯಾಪಾರಿಗಳಿಗೆ ತಲಾ 2 ಸಾವಿರ ಪರಿಹಾರ

-20 ಸಾವಿರ ರೈರಿಗೆ 12.73 ಕೋಟಿ ಮೊತ್ತದ ನೆರವು

-ಆಟೋ, ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ 3 ಸಾವಿರ

-ಪ್ರತಿ ಹೆಕ್ಟೇರ್ ಹೂವು ಹಾನಿಗೆ 10 ಸಾವಿರ ರೂ. ಸಹಾಯಧನ

-ಹಣ್ಣು ತರಕಾರಿ ಬೆಳೆಗಾರರಿಗೆ 10 ಸಾವಿರ ರೂ. ಸಹಾಯಧನ

-ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ ಪರಿಹಾರ

-ಅಸಂಘಟಿತ ಕಾರ್ಮಿಕರಿಗೆ ತಲಾ 2 ಸಾವಿರ ರೂ.

-ಆರು ಲಕ್ಷ ಜನರಿಗೆ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಊಟ

-ಸಹಕಾರಿ ಸಂಘಗಳಿಂದ ರೈತರ ಸಾಲ ಮರುಪಾವತಿ ದಿನಾಂಕ ವಿಸ್ತರಣೆ, 31 ಜುಲೈಗೆ ಅವಧಿ ವಿಸ್ತರಣೆ

-ಬಿಪಿಎಲ್ ಕಾರ್ಡುದಾರರಿಗೆ 5 ಕೆಜಿ ಅಕ್ಕಿ ವಿತರಿಸಲು ನಿರ್ಧಾರ

-ಎಪಿಎಲ್ ಕಾರ್ಡುದಾರರಿಗೆ 15ರೂ ನಂತೆ 5 ಕೆಜಿ ಅಕ್ಕಿ

-ಲೈನ್ ಮೆನ್ ಗಳು, ಗ್ಯಾಸ್ ಸಿಲೆಂಡರ್ ವಿತರಕರನ್ನು ಫ್ರೆಂಟ್ ಲೈನ್ ವರ್ಕರ್ಸ್ ಎಂದು ಪರಿಗಣಿಸಿ ಲಸಿಕೆ ನೀಡಲು ಆದ್ಯತೆ

-ಮೂರು ಕೋಟಿ ಲಸಿಕೆ ಖರೀದಿಗೆ ನಿಗದಿ

-ಕಲಾವಿದರು ಕಲಾ ತಂಡಗಳಿಗೆ ತಲಾ3 ಸಾವಿರ ರೂಪಾಯಿ

-ಕೋವಿಡ್ ನಿರ್ವಹಣೆಗಾಗಿ ಎಸ್.ಡಿ.ಎಫ್ ಹಣವನ್ನು ಪ್ರತಿ ಗ್ರಾಮ ಪಂಚಾಯತಿಗಳಿಗೆ 50 ಸಾವಿರ ಅನುದಾನ. ಪ್ರತಿ ಗ್ರಾಮ ಪಂಚಾಯತ್ ನಲ್ಲೂ ಕೋವಿಡ್ ನಿರ್ವಹಣೆಗೆ ಎಸ್ಡಿಆರ್ಎಫ್ ಹಣ ಬಳಕೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights