ಜಿಲ್ಲೆಗಳ ಕೋವಿಡ್ ನಿಯಂತ್ರಣ ಜಿಲ್ಲಾಧಿಕಾರಿಗಳ ಹೆಗಲಿಗೆ; ಹಲವು ಜಿಲ್ಲೆಗಳು ಸಂಪೂರ್ಣ ಲಾಕ್‌ಡೌನ್‌!

ಕೊರೊನಾ ನಿಯಂತ್ರಣದ ಬಗ್ಗೆ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಭೆ ನಡೆದ್ದು, ಆಹಾ ಜಿಲ್ಲೆಗಳಲ್ಲಿನ ಕೊರೊನಾ ನಿಯಂತ್ರಣದ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳ ಹೆಗಲಿಗೆ ನೀಡಲಾಗಿದೆ. ಸಭೆಯ ಬಳಿಕ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಲವು ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್‌ಡೌನ್‌ ಜಾರಿಗೊಳಿಸಿದ್ದಾರೆ.

ರಾಜ್ಯದಲ್ಲಿ ಮೇ 24ರ ವರೆಗೆ ಲಾಕ್‌ಡೌನ್‌ ಜಾರಿಯಲ್ಲಿದ್ದು, ಹಲವು ಚಟುವಟಿಗಳಿಗೆ ಅವಕಾಶ ನೀಡಲಾಗಿತ್ತು. ಆದರೆ, ಮೋದಿಯವರು ಜಿಲ್ಲಾಧಿಕಾರಿಗಳಿಗೆ ಜವಾಬ್ದಾರಿ ನೀಡದ ಬಳಿಕ, ಮತ್ತಷ್ಟು ಚಟುವಟಿಗಳಿಗೆ ನಿರ್ಬಂಧ ಹೇರಲಾಗಿದೆ.

ಪ್ರತಿದಿನ ಬೆಳಗ್ಗೆ 10 ಗಂಟೆಯ ವರೆಗೆ ಅಗತ್ಯ ವಸ್ತುಗಳನ್ನು ಕೊಳ್ಳಲು ಅವಕಾಶ ನೀಡಲಾಗಿತ್ತು. ಆದರೆ, ಈಗ ಪ್ರತಿದಿನದ ಅವಕಾಶವನ್ನು ನಿರ್ಬಂಧಿಸಿದ್ದು, ವಿವಿಧ ಜಿಲ್ಲೆಗಳಲ್ಲಿ ವಾರದಲ್ಲಿ ಎರಡು ದಿನ ಮಾತ್ರ ಕೊಳ್ಳುವ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ.

ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮೇ 19ರ ಬೆಳಗ್ಗೆ 10 ರಿಂದ ಮೇ 24ರ ಬೆಳಗ್ಗೆ 6ರವರೆಗೆ ಸಂಪೂರ್ಣ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ತುರ್ತು ಸೇವೆಗಳಿಗೆ ಮಾತ್ರ ವಿನಾಯಿತಿ ಇದ್ದು, ಜನರ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಹಾಸನ ಜಿಲ್ಲೆಯಲ್ಲಿ ವಾರದ 4 ದಿನ ಸಂಪೂರ್ಣ ಲಾಕ್‍ಡೌನ್ ಜಾರಿಗೊಳಿಸಲು ನಿರ್ಧರಿಸಲಾಗಿದ್ದು ಸೋಮವಾರ, ಬುಧವಾರ, ಶುಕ್ರವಾರ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಅವಕಾಶ ಇರುತ್ತದೆ.

ಕಲಬುರಗಿ ಜಿಲ್ಲೆಯಲ್ಲಿ ಮೇ 20ರ ಬೆಳಗ್ಗೆ 6 ಗಂಟೆಯಿಂದ ಮೇ 23ರ ಬೆಳಗ್ಗೆ 6 ಗಂಟೆ ವರೆಗೆ ಅತ್ಯಗತ್ಯ ಸೇವೆಗಳನ್ನು ಹೊರತುಪಡಿಸಿ ಇತರೆ ಎಲ್ಲಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿರ್ಬಂಧಿಸಿ ಜಿಲ್ಲಾಧಿಕಾರಿ ವಿ. ವಿ. ಜ್ಯೋತ್ಸ್ನಾ ಆದೇಶ ಹೊರಡಿಸಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿ ಕೋವಿಡ್ 2ನೇ ಅಲೆ ಹರಡುವಿಕೆ ತಡೆಯಲು ಜಿಲ್ಲಾಯಾದ್ಯಂತ ಮೇ 17ರ ಬೆಳಗ್ಗೆ 6 ಗಂಟೆಯಿಂದ ಮೇ 21ರ ರಾತ್ರಿ 12 ಗಂಟೆ ತನಕ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ವಾರ ಗುರುವಾರದಿಂದ ಭಾನುವಾರದ ತನಕ ಸಂಪೂರ್ಣ ಲಾಕ್‌ಡೌನ್ ಮಾಡಲಾಗಿತ್ತು. ಈ ವಾರವೂ ಅದನ್ನು ಮುಂದುವರಿಸಿ ಪ್ರಕಟಣೆಯನ್ನು ಹೊರಡಿಸಲಾಗಿದೆ.

ಈ ಮಧ್ಯೆ, ಸಿಎಂ ಯಡಿಯೂರಪ್ಪ ಅವರು ಇಂದು ಪತ್ರಿಕಾಗೋಷ್ಟಿ ಕರೆದಿದ್ದು, ಲಾಕ್‌ಡೌನ್‌ ವಿಸ್ತರಣೆ, ವಿಶೇಷ ಪ್ಯಾಕೇಜ್‌ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮಾಹಿತಿ ನೀಡುವ ನಿರೀಕ್ಷೆ ಇದೆ.

ಇದನ್ನೂ ಓದಿ: ಕಡಿಮೆಯಾಗಿದ್ದು ಕೊರೊನಾ ಪ್ರಕರಣಗಳಲ್ಲ; ಕೊರೊನಾ ಪರೀಕ್ಷೆಗಳು!

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights