ಪಂಚಾಯತಿ ಚುನಾವಣೆ ಕೆಲಸದಲ್ಲಿ ಭಾಗಿಯಾಗಿದ್ದ 1621 ಶಿಕ್ಷಕರ ಸಾವು; ಸರ್ಕಾರದ ವಿರುದ್ದ ಪ್ರಿಯಾಂಕಾ ಗಾಂಧಿ ಆಕ್ರೋಶ

ಉತ್ತರ ಪ್ರದೇಶದಲ್ಲಿ ನಡೆದ ಪಂಚಾಯತಿ ಚುನಾವಣಾ ಸಂದರ್ಭದಲ್ಲಿ ಕಾರ್ಯನಿರ್ವಹಿಸಿದ್ದ ಶಿಕ್ಷಕರ ಪೈಕಿ ಇದೂವರೆಗೂ 1,621 ಶಿಕ್ಷಕರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. “ಕೊರೊನಾದಿಂದ ಮೃತಪಟ್ಟ ಶಿಕ್ಷಕರು,ಕಾರ್ಯಕರ್ತರು ಜೀವಂತವಾಗಿದ್ದಾಗ ಸರ್ಕಾರವು ಸರಿಯಾದ ಚಿಕಿತ್ಸೆ ನೀಡಿರಲಿಲ್ಲ. ಸಾವಿನ ನಂತರವೂ ಅವರಿಗೆ ಗೌರವ ನೀಡುತ್ತಿಲ್ಲ” ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಏಪ್ರಿಲ್‌ ತಿಂಗಳಿನಲ್ಲಿ ನಡೆದ ಚುನಾವಣೆಯ ನಂತರ ಮೇ 16ರವರೆಗೆ ಕೊರೊನಾದಿಂದ 1,600 ಕ್ಕೂ ಹೆಚ್ಚು ಶಿಕ್ಷಕರು ಮತ್ತು ಮೂಲ ಶಿಕ್ಷಣ ಇಲಾಖೆಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ. ಇವರಲ್ಲಿ ಶೇ. 90ರಷ್ಟು ಶಿಕ್ಷಕರು ಚುನಾವಣೆ ಕರ್ತವ್ಯದಲ್ಲಿ ಭಾಗಿಯಾಗಿದ್ದರು ಎಂದು ತಿಳಿದು ಬಂದಿದೆ.

ಈ ಬಗ್ಗೆ ಮಾಹಿತಿ ನೀಡಿದ್ದ ಶಿಕ್ಷಕರ ಸಂಘವು ಪಂಚಾಯತಿ ಚುನಾವಣೆಯ ಕರ್ತವ್ಯದಲ್ಲಿ ಭಾಗಿಯಾಗಿದ್ದ 1621 ಶಿಕ್ಷಕರು ಕೊರೊನಾದಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಿದೆ. ಆದರೆ, ಉತ್ತರ ಪ್ರದೇಶ ಸರ್ಕಾರ ಕೇವಲ ಮೂರು ಶಿಕ್ಷಕರು ಮಾತ್ರ ಮೃತಪಟ್ಟಿದ್ದಾರೆ ಎಂದು ಹೇಳಿದೆ. ಇದು ಸರ್ಕಾರವು ಶಿಕ್ಷಕರಿಗೆ ಮಾಡುತ್ತಿರುವ ಅಪಮಾನ ಎಂದು ಯೋಗಿ ಆದಿತ್ಯನಾಥ್‌ ಸರ್ಕಾರದ ವಿರುದ್ದ ಪ್ರಿಯಾಂಕ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಸರಿಯಾದ ಸುರಕ್ಷತಾ ಸಾಧನಗಳನ್ನು ನೀಡಿರಲಿಲ್ಲ. ಅವರು ಜೀವಂತವಾಗಿದ್ದಾಗ ಸರಿಯಾದ ಚಿಕಿತ್ಸೆ ಕೂಡ ನೀಡಿಲ್ಲ. ಸಾವಿನ ಬಳಿಕವೂ ಅವರ ಗೌರವವನ್ನು ಕಿತ್ತುಕೊಳ್ಳಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಪ್ರಿಯಾಂಕಗಾಂಧಿ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಕಡಿಮೆಯಾಗಿದ್ದು ಕೊರೊನಾ ಪ್ರಕರಣಗಳಲ್ಲ; ಕೊರೊನಾ ಪರೀಕ್ಷೆಗಳು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights