ಉಸಿರಾಟದ ತೊಂದರೆಯಿಂದ ನಟ ವಿಜಯಕಾಂತ್ ಆಸ್ಪತ್ರೆಗೆ ದಾಖಲು!

ಉಸಿರಾಟದ ತೊಂದರೆಯಿಂದ ನಟ ವಿಜಯಕಾಂತ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ದೇಸಿಯಾ ಮುರ್ಪೊಕ್ಕು ದ್ರಾವಿಡಾ ಕಝಾಗಂ (ಡಿಎಂಡಿಕೆ) ಸ್ಥಾಪಕ ಮತ್ತು ತಮಿಳು ನಟ ವಿಜಯಕಾಂತ್ ಅವರನ್ನು ಉಸಿರಾಟದ ತೊಂದರೆಯಿಂದ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ, ಬುಧವಾರ ಮುಂಜಾನೆ 3 ಗಂಟೆ ಸುಮಾರಿಗೆ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಹಲವಾರು ಆರೋಗ್ಯ ಸಮಸ್ಯೆಗಳನ್ನು ಹೊಂದಿರುವ ವಿಜಯಕಾಂತ್ ಅವರ ಆರೋಗ್ಯ ಸ್ಥಿತಿ ಗತಿ ಬಗ್ಗೆ  ಯಾವುದೇ ವಿವರಗಳನ್ನು ಆಸ್ಪತ್ರೆ ಇನ್ನೂ ನೀಡಿಲ್ಲ.

ವೈದ್ಯರ ತಂಡ ಅವರ ಆರೋಗ್ಯ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ. ಅವರ ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಪಕ್ಷದ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. ಅವರು ಒಂದು ಅಥವಾ ಎರಡು ದಿನಗಳಲ್ಲಿ ಡಿಸ್ಚಾರ್ಜ್ ಆಗುವ ನಿರೀಕ್ಷೆಯಿದೆ. ಆಸ್ಪತ್ರೆಯಿಂದ ಈ ಬಗ್ಗೆ ಮಾಹಿತಿ ಇನ್ನೂ ಹೊರಬೀಳಬೇಕಿದೆ.

ಸೆಪ್ಟೆಂಬರ್ 2020 ರಲ್ಲಿ ವಿಜಯಕಾಂತ್ ಕೊರೋನವೈರಸ್ ನಿಂದ ಗುಣಮುಖರಾಗಿದ್ದು. ಕೆಲವು ದಿನಗಳವರೆಗೆ ಕೊರೊನಾಕ್ಕೆ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದರು.

ವಿಜಯಕಾಂತ್ ಅವರ ಪತ್ನಿ ಪ್ರೇಮಲತಾ ಅವರಿಗೂ ಸಹ ಕೋವಿಡ್  ಸೋಂಕು ತಗುಲಿತ್ತು. ಅಕ್ಟೋಬರ್ 2 ರಂದು ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಿ ಮನೆಯ ಪ್ರತ್ಯೇಕತೆಯಲ್ಲಿರಲು ತಿಳಿಸಲಾಗಿತ್ತು. ಸದ್ಯ ಅವರು ಗುಣಮುಖರಾಗಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights