ಪಂಜಾಬ್‌ನಲ್ಲಿ ಭಾರತೀಯ ವಾಯುಪಡೆಯ ಮಿಗ್ -21 ಯುದ್ಧ ವಿಮಾನ ಅಪಘಾತ : ಪೈಲಟ್ ಸಾವು!

ಪಂಜಾಬ್‌ನಲ್ಲಿ ಭಾರತೀಯ ವಾಯುಪಡೆಯ ಮಿಗ್ -21 ಯುದ್ಧ ವಿಮಾನ ಅಪಘಾತದಲ್ಲಿ ಪೈಲೆಟ್ ಸಾವನ್ನಪ್ಪಿದ್ದಾರೆ.

ಶುಕ್ರವಾರ ಮುಂಜಾನೆ ಪಂಜಾಬ್‌ನ ಮೊಗಾ ಬಳಿ ಮಿಗ್ -21 ವಿಮಾನ ಅಪಘಾತಕ್ಕೀಡಾಗಿ ಭಾರತೀಯ ವಾಯುಪಡೆಯ (ಐಎಎಫ್) ಪೈಲಟ್ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಪೈಲಟ್ ಸ್ಕ್ವಾಡ್ರನ್ ಲೀಡರ್ ಅಭಿನವ್ ಚೌಧರಿ ಮೃತಪಟ್ಟಿದ್ದಾರೆ.

ಶುಕ್ರವಾರ ಮುಂಜಾನೆ 1 ಗಂಟೆ ಸುಮಾರಿಗೆ ಮೊಗಾದ ಬಾಗಾಪುರಾನದ ಲ್ಯಾಂಗಿಯಾನಾ ಖುರ್ದ್ ಗ್ರಾಮದಲ್ಲಿ ಐಎಎಫ್‌ನ ಮಿಗ್ -21 ಅಪಘಾತಕ್ಕೀಡಾಗಿದೆ. ಅಪಘಾತ ಸಂಭವಿಸಿದಾಗ ಐಎಎಫ್ ವಿಮಾನವು ದಿನನಿತ್ಯದ ತರಬೇತಿ ಹಂತದಲ್ಲಿದೆ ಎಂದು ವಾಯುಪಡೆಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದ ವಾಯುಪಡೆ ಕುಟುಂಬಸ್ಥರ ಸಂಕಷ್ಟ ಸಮಯದಲ್ಲಿ ಅವರ ಪರವಾಗಿ ಇರುವುದಾಗಿ ಭಾರತೀಯ ವಾಯುಪಡೆ ಟ್ವಿಟ್ಟರ್ನಲ್ಲಿ ಹೇಳಿದೆ.

ಅಪಘಾತದ ಕಾರಣವನ್ನು ಕಂಡುಹಿಡಿಯಲು ತನಿಖಾ ನ್ಯಾಯಾಲಯಕ್ಕೆ ಆದೇಶಿಸಲಾಗಿದೆ ಎಂದು ಐಎಎಫ್ ತಿಳಿಸಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights