ಕೊರೊನಾ ಲಾಕ್ಡೌನ್ ನಿಯಮ ಉಲ್ಲಂಘಿಸಿದ ಯುವಕ : ಥಳಿಸಿ ಕೊಂದ ಕಾನ್‌ಸ್ಟೆಬಲ್ಸ್ ಅಮಾನತು!

ಕೊರೊನಾ ಲಾಕ್ಡೌನ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಪೊಲೀಸರು ಥಳಿಸಿದ ನಂತರ 17 ವರ್ಷದ ಯುವಕ ಸಾವನ್ನಪ್ಪಿದ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ರಾಜ್ಯದಲ್ಲಿ ನಡೆಯುತ್ತಿರುವ ಕೊರೋನಾ ಕರ್ಫ್ಯೂ ಅನ್ನು ಉಲ್ಲಂಘಿಸಿದ್ದಕ್ಕಾಗಿ 17 ವರ್ಷದ ಯುವಕನನ್ನು ಪೊಲೀಸರು ಥಳಿಸಿದ್ದಾರೆ ಎಂದು ಅವರ ಕುಟುಂಬ ಹೇಳಿಕೊಂಡಿದೆ. ಯುವಕ ಸಾವನ್ನಪ್ಪಿದ್ದು ಘಟನೆಯ ಬಳಿಕ ಉತ್ತರ ಪ್ರದೇಶದ ಉನ್ನಾವ್ ಜಿಲ್ಲೆಯ ಇಬ್ಬರು ಪೊಲೀಸ್ ಕಾನ್‌ಸ್ಟೆಬಲ್‌ಗಳನ್ನು ಅಮಾನತುಗೊಳಿಸಲಾಗಿದೆ.

ಬಂಗಾರ್‌ಮೌ ಪ್ರದೇಶದ ಭಟ್‌ಪುರಿ ಪ್ರದೇಶದಲ್ಲಿ ಬಾಲಕ ತನ್ನ ಮನೆಯ ಹೊರಗೆ ತರಕಾರಿ ಮಾರುತ್ತಿದ್ದಾಗ ಈ ಘಟನೆ ನಡೆದಿದೆ. ಆತನನ್ನು ಪೊಲೀಸರು ಎತ್ತಿಕೊಂಡು, ಸ್ಥಳೀಯ ಪೊಲೀಸ್ ಠಾಣೆಗೆ ಕರೆದೊಯ್ದು ಕೆಟ್ಟದಾಗಿ ಹಲ್ಲೆ ಮಾಡಿದ್ದಾರೆ. ನಂತರ ಯುವಕನ ಸ್ಥಿತಿ ಹದಗೆಟ್ಟಿದೆ. ಬಳಿಕ ಅವರನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಅದಾಗಲೆ ಯುವಕ ಸಾವನ್ನಪ್ಪಿದ್ದಾನೆ ಎಂದು ಬಾಲಕನ ಕುಟುಂಬ ಆರೋಪಿಸಿದೆ. ಘಟನೆಯಲ್ಲಿ ಭಾಗಿಯಾಗಿರುವ ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು. ಸಂಪೂರ್ಣ ತನಿಖೆ ನಡೆಸಲಾಗುವುದು ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕೊರೋನಾ ಕರ್ಫ್ಯೂ ಉಲ್ಲಂಘಿಸಿದ ಆರೋಪದ ಮೇಲೆ ಬಾಲಕನನ್ನು ಕಾನ್‌ಸ್ಟೆಬಲ್ ಹಿಡಿದು ಕೋಲಿನಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎಂದು ಆತನ ಕುಟುಂಬ ಆರೋಪಿಸಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights