‘ಚುನಾವಣೆ ಕರ್ತವ್ಯದಲ್ಲಿ ದುಡಿದು ಕೊರೊನಾಗೆ ಸಾವನ್ನಪ್ಪಿದ ಶಿಕ್ಷಕರಿಗೆ ಪರಿಹಾರ ಕೊಡಿ’- ಹೆಚ್ಡಿಕೆ ಆಗ್ರಹ!

ಚುನಾವಣೆ ಕರ್ತವ್ಯದಲ್ಲಿ ದುಡಿದು ಕೊರೊನಾಗೆ ಸಾವನ್ನಪ್ಪಿದ ಶಿಕ್ಷಕರಿಗೆ ಪರಿಹಾರಕ್ಕಾಗಿ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಟ್ವೀಟರ್ ಮೂಲಕ ಆಗ್ರಹಿಸಿದ್ದಾರೆ.

ಚುನಾವಣೆ ಕರ್ತವ್ಯದಲ್ಲಿ ದುಡಿದ ಮತ್ತು ವಿದ್ಯಾಗಮ ಯೋಜನೆ ಮೂಲಕ ಪಾಠ ಮಾಡಿದ ಕಲ್ಯಾಣ ಕರ್ನಾಟಕದ 145 ಶಿಕ್ಷಕರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಉಳಿದ ಕಡೆ ಮೃತಪಟ್ಟವರ ಲೆಕ್ಕ ಸಿಗುತ್ತಿಲ್ಲ. ಮೃತಪಟ್ಟ ಎಲ್ಲ ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಿ ಕನಿಷ್ಠ 50 ಲಕ್ಷ ರೂ ಪರಿಹಾರ ನೀಡುವಂತೆ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. 

145ಕ್ಕೂ ಹೆಚ್ಚು ಶಿಕ್ಷಕರು ಹೈದರಾಬಾದ್-ಕರ್ನಾಟಕದಲ್ಲಿ ಅಂದರೆ ಕಲ್ಯಾಣ ಕರ್ನಾಟಕದಲ್ಲಿ ಸಾವನ್ನಪ್ಪಿದ್ದಾರೆ. ಸರ್ಕಾರ ಕೊಟ್ಟ ಆದೇಶ ಪಾಲಿಸಿ ರಾಜ್ಯದಾದ್ಯಂತ ಇನ್ನೂ ಹಲವು ಶಿಕ್ಷಕರ ಪ್ರಾಣ ಹೋಗಿದೆ.

ಈ ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಬೇಕು. ಇನ್ನೂ ಸಾವಿರಾರು ಶಿಕ್ಷಕರು ಕೊರೋನಾ ಸೋಂಕಿನಿಂದ ಬಳಲುತ್ತಿದ್ದಾರೆ. ಅವರನ್ನು ಚುನಾವಣೆ ಹಾಗೂ ಮತ್ಯಾವುದೋ ಕಾರಣಕ್ಕೆ ನಿಯೋಜಿಸಿದ ಸರ್ಕಾರವೇ ಈ ಸಾವುಗಳ ಸಂಪೂರ್ಣ ಹೊಣೆ ಹೊರಬೇಕು. 

ಭವಿಷ್ಯ ಕಟ್ಟುವ ಶಿಕ್ಷಕರ ಬಗ್ಗೆ ಸರ್ಕಾರದ ಉಡಾಫೆ ಹಾಗೂ ದಿವ್ಯ ನಿರ್ಲಕ್ಷ್ಯ ಧೋರಣೆ ಬಗ್ಗೆ ನನ್ನ ಧಿಕ್ಕಾರವಿದೆ. ಸರ್ಕಾರ ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತೇನೆ ಎಂದು ಟ್ವೀಟರ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights